ಗುರುವಾರ , ಆಗಸ್ಟ್ 22, 2019
27 °C

ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳ ನವೋಲ್ಲಾಸ

Published:
Updated:

ಎಚ್‌ಆರ್‌ಬಿಆರ್ ಲೇಔಟ್‌ನಲ್ಲಿರುವ ಸಿಎಂಆರ್ ನ್ಯಾಷನಲ್ ಪಿಯು ಕಾಲೇಜಿನ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಈಚೆಗೆ ಅಂತರ ತರಗತಿ ಸಾಹಿತ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣಕ್ಕೆ ವೇದಿಕೆ ಕಲ್ಪಿಸಿಕೊಟ್ಟಿದ್ದ ಈ ಕಾರ್ಯಕ್ರಮ ಅನೇಕ ಉತ್ತಮ ಚಟುವಟಿಕೆಗಳಿಗೆ ಸಾಕ್ಷಿಯಾಯಿತು. ಈ ಕಾರ್ಯಕ್ರಮದಲ್ಲಿ ಕಥೆ, ಕವನ, ವ್ಯಂಗ್ಯಚಿತ್ರ, ಚಿತ್ರಕಲೆ, ಘೋಷಣೆ, ಕಂಠಪಾಠ, ಬೀದಿನಾಟಕ ಮೊದಲಾದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರತಿಭಾವಂತರು ಬಹುಮಾನ ಗಳಿಸಿದರು. ಅವರು ಸಾಮಾಜಿಕ ಕಳಕಳಿ ಬಿಂಬಿಸುವ ನಾಟಕವೊಂದನ್ನು ಪ್ರಸ್ತುತಪಡಿಸಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.ಎಲ್ಲಾ ಸ್ಪರ್ಧೆಗಳಿಗೂ ಕಾಲೇಜಿನ ಹಳೆಯ ವಿದ್ಯಾರ್ಥಿಗಳು ತೀರ್ಪುಗಾರರಾಗಿದ್ದರು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರಾದ ನಂದಿನಿ ನಾಗರಾಜ್ ಬಹುಮಾನ ವಿತರಿಸಿ ಗೆದ್ದ ವಿದ್ಯಾರ್ಥಿಗಳ ಬೆನ್ನುತಟ್ಟಿ ಪ್ರೋತ್ಸಾಹಿಸಿದರು.

 

Post Comments (+)