ಮಂಗಳವಾರ, ಅಕ್ಟೋಬರ್ 22, 2019
21 °C

ಸಾಹಿತ್ಯ ಅಕಾಡೆಮಿಗೆ ಸರ್ಕಾರದ ಅನುದಾನ

Published:
Updated:

ಬೆಂಗಳೂರು: ಕವಿರತ್ನತ್ರಯರಲ್ಲಿ ಒಬ್ಬರಾದ ರನ್ನ ರಚಿಸಿರುವ ಸಾಹಸಭೀಮ ವಿಜಯ ಮತ್ತು ಅಜಿತನಾಥ ಪುರಾಣ ಕೃತಿಗಳ ಮುದ್ರಣಕ್ಕಾಗಿ ರಾಜ್ಯ ಸರ್ಕಾರ ಹತ್ತು ಲಕ್ಷ ರೂ ಅನುದಾನವನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಗೆ ಬಿಡುಗಡೆ ಮಾಡಿದೆ.ತಲಾ ಸಾವಿರ ಪ್ರತಿಗಳನ್ನು ಮುದ್ರಿಸಲಾಗುತ್ತದೆ. ಜನಸಾಮಾನ್ಯರು, ವಿದ್ಯಾರ್ಥಿಗಳಿಗೆ ಕಡಿಮೆ ದರದಲ್ಲಿ ದೊರಕುವಂತೆ ಬೆಲೆ ನಿಗದಿ ಮಾಡಬೇಕು.ಸರ್ಕಾರ ನೀಡಿರುವ ಅನುದಾನವನ್ನು ಉದ್ದೇಶಿತ ಕಾರ್ಯಕ್ಕೆ ಮಾತ್ರ ಬಳಸಬೇಕು ಎಂಬುದು ಸೇರಿದಂತೆ ಕೆಲ ಷರತ್ತುಗಳನ್ನು ವಿಧಿಸಲಾಗಿದೆ.ಮಂಜೂರಾತಿ: ಕೇಂದ್ರ ಲೋಕಸೇವಾ ಆಯೋಗ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಐಎಎಸ್, ಐಪಿಎಸ್, ಐಎಫ್‌ಎಸ್ ಮತ್ತಿತರ ಸೇವೆಗಳಿಗೆ ಆಯ್ಕೆಯಾಗುವ ಕರ್ನಾಟಕದ ವಿದ್ಯಾರ್ಥಿಗಳಿಗೆ ಒಂದು ಲಕ್ಷ ರೂಪಾಯಿ ಪ್ರೋತ್ಸಾಹಧನ ನೀಡುವ ಸಂಬಂಧ ಸರ್ಕಾರ ಇದೇ 9ರಂದು ಆದೇಶ ಹೊರಡಿಸಿದೆ.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)