ಶುಕ್ರವಾರ, ಮೇ 20, 2022
21 °C

ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ಎ.ಜಾನಕಿ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ಡಾ.ಎ.ಜಾನಕಿ (68) ಶನಿವಾರ ಸಂಜೆ ಹೃದಯಾಘಾತದಿಂದ ಕುವೆಂಪುನಗರದ ನಿವಾಸದಲ್ಲಿ ನಿಧನರಾದರು.ಕನ್ನಡ ಮತ್ತು ಹಿಂದಿ ಭಾಷೆಗಳ ನಡುವೆ ಸಂಪರ್ಕ ಸೇತುವೆಯಂತಿದ್ದ ಇವರು ಭಾಷಾಂತರಿಸಿದ ಪ್ರೇಮಚಂದ್‌ರ ‘ಗೋದಾನ್’ ಕಾದಂಬರಿಗೆ 2010 ರ ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿ ಯನ್ನು ಪಡೆಯುವ ಮುನ್ನವೇ ಇಲ್ಲವಾಗಿದ್ದಾರೆ.ಜಾನಕಿ ಅವರು ಮೈಸೂರು, ಬೆಂಗಳೂರು ಮಹಾರಾಣಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ಪ್ರಾಚಾರ್ಯರಾಗಿ, ನಂತರದಲ್ಲಿ ಮಂಡ್ಯ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರಾಗಿದ್ದರು.ಧಾರವಾಡದಲ್ಲಿ ಜಂಟಿ  ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಇವರು ಪ್ರೇಮಚಂದ್ ಅವರ 800ಕ್ಕೂ ಹೆಚ್ಚು ಸಣ್ಣಕಥೆಗಳನ್ನು ಕನ್ನಡಕ್ಕೆ  ಭಾಷಾಂತರಿಸಿದ್ದರು. ಭಾನುವಾರ ಬೆಳಿಗ್ಗೆ ಹರಿಶ್ಚಂದ್ರ ಘಾಟ್‌ನಲ್ಲಿ ಅಂತ್ಯಕ್ರಿಯೆ ನಡೆಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.