ಕೊಳ್ಳೇಗಾಲ: 3ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಜೂನ್ 15ರಂದು ಹನೂರು ಪಟ್ಟಣದ ಸರ್ಕಾರಿ ಜಿ.ವಿ. ಗೌಡ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಿರ್ಮಿಸಿರುವ ಮಲೆ ಮಹದೇಶ್ವರ ಸಭಾಮಂಟಪದಲ್ಲಿ ನಡೆಯಲಿದೆ.

ಬೆಳಿಗ್ಗೆ 8.30ಕ್ಕೆ ತಹಶೀಲ್ದಾರ್ ಮಾಳಿಗಯ್ಯ ಅವರು ರಾಷ್ಟ್ರಧ್ವಜ, ಸರ್ಕಲ್ ಇನ್ಸ್ಪೆಕ್ಟರ್ ರಾಜಣ್ಣ ಅವರು ನಾಡಧ್ವಜ, ತಾಲ್ಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷ ಚಿಕ್ಕಬಸವಯ್ಯ ಅವರು ಪರಿಷತ್ತಿನ ಧ್ವಜಾರೋಹಣ ನೆರವೇರಿಸುವರು.

ನಂತರ 9.30ಕ್ಕೆ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಬಳಿಯಿಂದ ವಿವಿಧ ಕಲಾ ತಂಡಗಳೊಂದಿಗೆ ಸಮ್ಮೇಳನಾಧ್ಯಕ್ಷ ಡಾ.ಎಸ್. ಶಿವರಾಜಪ್ಪ ಅವರನ್ನು ನಿಜಗುಣ ಶಿವಯೋಗಿ ವೇದಿಕೆಗೆ ಕರೆತರಲಾಗುವುದು. ಮೆರವಣಿಗೆಯನ್ನು ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ದಾಕ್ಷಾಯಿಣಿ ಉದ್ಘಾಟಿಸುವರು. ಅತಿಥಿಗಳಾಗಿ ಉಪಾಧ್ಯಕ್ಷ ನಂಜೇಗೌಡ, ಉಪವಿಭಾಗಾಧಿಕಾರಿ ಎಚ್.ಎಸ್. ಸತೀಶ್ಬಾಬು, ಕ್ಷೇತ್ರಶಿಕ್ಷಣಾಧಿಕಾರಿ ಸ್ವಾಮಿ ಭಾಗವಹಿಸಲಿದ್ದಾರೆ.

ಬಳಿಕ 10.30ಕ್ಕೆ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ವಿದ್ವಾಂಸ ಡಾ.ಅರವಿಂದ ಮಾಲಗತ್ತಿ ಅವರು ಸಮ್ಮೇಳನ ಉದ್ಘಾಟಿಸುವರು.
ಜಿ.ವಿ. ಗೌಡ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ನಾಡಗೀತೆ, ಅರುಣ್ಕುಮಾರ್ ಮತ್ತು ಜೆ. ಮೂರ್ತಿ ರೈತಗೀತೆ ಹಾಡಲಿದ್ದಾರೆ. ಮಲೆ ಮಹದೇಶ್ವರ ಬೆಟ್ಟ ಸಾಲೂರು ಮಠಾಧ್ಯಕ್ಷರಾದ ಪಟ್ಟದ ಗುರುಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸುವರು.

ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಸೋಮಶೇಖರ ಬಿಸಲ್ವಾಡಿ ಆಶಯ ನುಡಿ, ಮಹಾದೇವ ಶಂಕನಪುರ, ನಿಕಟಪೂರ್ವ ಸಮ್ಮೇಳನಾಧ್ಯಕ್ಷರ ಅನಿಸಿಕೆ ವ್ಯಕ್ತಪಡಿಸುವರು. ಅಧ್ಯಕ್ಷತೆಯನ್ನು ಶಾಸಕ ಆರ್. ನರೇಂದ್ರ ವಹಿಸುವರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ನಾಗಶ್ರೀ ಪ್ರತಾಪ್, ಉಪಾಧ್ಯಕ್ಷ ಮಹದೇವಪ್ಪ, ಸದಸ್ಯರಾದ ಶಿವಮ್ಮ, ಈಶ್ವರ್, ಡಿ. ದೇವರಾಜು, ಮಹಾದೇವನಾಯ್ಕ, ಎ. ನಾಗೇಂದ್ರಮೂರ್ತಿ, ಯಶೋಧಾಪ್ರಭುಸ್ವಾಮಿ, ಚಂದ್ರಕಲಾಬಾಯಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ವಿಚಾರಗೋಷ್ಠಿ ಮತ್ತು 3 ಗಂಟೆಗೆ ಕವಿಗೋಷ್ಠಿ ನಡೆಯಲಿದೆ. ಸಂಜೆ 4. 30ಕ್ಕೆ
ಸಮಾರೋಪ ಸಮಾರಂಭ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕಿ ಪರಿಮಳಾನಾಗಪ್ಪ, ಜಿ.ಎನ್. ನಂಜುಂಡಸ್ವಾಮಿ, ಎಸ್. ಬಾಲರಾಜ್, ಎ.ಎಂ. ನಾಗಮಲ್ಲಪ್ಪ ಮತ್ತು ಮಲ್ಲೇಶಪ್ಪ ಭಾಗವಹಿಸುವರು. ಶಾಸಕ ಎಸ್. ಜಯಣ್ಣ ಅಧ್ಯಕ್ಷತೆ ವಹಿಸುವರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಸನ್ಮಾನಿಸಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.