ಬೆಂಗಳೂರು: ನಟ, ನಿರ್ಮಾಪಕ ರಾಘವೇಂದ್ರ ರಾಜ್ಕುಮಾರ್ ಅವರು ಫಿಸಿಯೋಥೆರಪಿ ಚಿಕಿತ್ಸೆಗಾಗಿ ಶುಕ್ರವಾರ (ಡಿ. 13) ಸಿಂಗಪುರಕ್ಕೆ ತೆರಳಲಿದ್ದಾರೆ. ಸಿಂಗಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯಲಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಎರಡು ತಿಂಗಳ ಹಿಂದೆ ಸದಾಶಿವನಗರದ ಮನೆ ಹತ್ತಿರದ ಅಫಿನಿಟಿ ಫಿಟ್ನೆಸ್ ಸೆಂಟರ್ನಲ್ಲಿ ಟ್ರೆಡ್ಮಿಲ್ ಮೇಲೆ ಓಡುತ್ತಿದ್ದಾಗ ರಾಘವೇಂದ್ರ ಅವರು ಕುಸಿದು ಬಿದ್ದಿದ್ದರು. ಬಳಿಕ ಯಶವಂತಪುರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆದಿದ್ದರು.

‘ಸದ್ಯ ಅವರು ಆರೋಗ್ಯವಾಗಿದ್ದಾರೆ. ಸಿಂಗಪುರದಲ್ಲಿ ಉತ್ತಮ ಫಿಸಿಯೋಥೆರಪಿ ಚಿಕಿತ್ಸೆ ಸಿಗುತ್ತದೆಂಬ ಕಾರಣಕ್ಕೆ ಅವರು ಅಲ್ಲಿಗೆ ಹೋಗುತ್ತಿದ್ದಾರೆಯೇ ಹೊರತು ಆತಂಕ ಪಡುವಂಥದ್ದು ಏನೂ ಆಗಿಲ್ಲ. ಅವರ ಜತೆಗೆ ಪತ್ನಿ ಮಂಗಳಾ ಮತ್ತು ಸೋದರ ಶಿವರಾಜ್ ಕುಮಾರ್ ಸಹ ತೆರಳಲಿದ್ದಾರೆ’ ಎಂದು ರಾಘವೇಂದ್ರ ರಾಜ್ಕುಮಾರ್ ಅವರ ಸೋದರಮಾವ ಚಿನ್ನೇಗೌಡ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.