ಬುಧವಾರ, ನವೆಂಬರ್ 13, 2019
18 °C

ಸಿಂಗ್, ಚಿದಂಬರಂ ದೋಷಮುಕ್ತ

Published:
Updated:

ನವದೆಹಲಿ (ಪಿಟಿಐ): 2ಜಿ ತರಂಗಾಂತರ ಹಗರಣದ ವಿಚಾರಣೆ ನಡೆಸಿದ ಜಂಟಿ ಸಂಸದೀಯ ಸಮಿತಿಯು (ಜೆಪಿಸಿ), ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಮತ್ತು ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನು ದೋಷಮುಕ್ತಗೊಳಿಸಿದೆ.ಅಲ್ಲದೇ, ಈ ಹಗರಣದಿಂದ ರಾಷ್ಟ್ರದ ಬೊಕ್ಕಸಕ್ಕೆ 1.76 ಲಕ್ಷ ಕೋಟಿ ರೂಪಾಯಿಗಳ ನಷ್ಟವಾಗಿದೆ ಎಂಬ ಮಹಾಲೇಖಪಾಲರ ಅಂದಾಜಿಗೆ ಜೆಪಿಸಿ ತನ್ನ ಕರಡು ವರದಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದೆ.ತರಂಗಾಂತರ ಹಂಚಿಕೆಗೆ ನಿಗದಿ ಮಾಡಿದ್ದ ಕಡೆಯ ದಿನಾಂಕವನ್ನು ಬದಲಾಯಿಸಿದ್ದು ಆಗ ದೂರಸಂಪರ್ಕ ಸಚಿವರಾಗಿದ್ದ ಎ.ರಾಜಾ ಅವರು. ತರಂಗಾಂತರ ಹಂಚಿಕೆಯಲ್ಲಿ ಅಕ್ರಮ ನಡೆಯಲು ರಾಜಾ ಅವರ ನಿರ್ಧಾರವೇ ಕಾರಣ ಎಂದೂ ಜೆಪಿಸಿ ಹೇಳಿದೆ.

ಪ್ರತಿಕ್ರಿಯಿಸಿ (+)