ನವದೆಹಲಿ (ಪಿಟಿಐ): ಕಾಂಗ್ರೆಸ್ ಮುಖಂಡ ಮತ್ತು ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಭಾಗಿಯಾಗಿದ್ದಾರೆ ಎಂದು ಹೇಳಲಾದ ಸಿ.ಡಿ ವಿವಾದ ಪ್ರಕರಣದ ತನಿಖೆಯನ್ನು ದೆಹಲಿಯ ಬಾರ್ ಕೌನ್ಸಿಲ್ನಿಂದ ನಡೆಸಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ಬುಧವಾರ ವಜಾ ಮಾಡಿದೆ.

`ವಕೀಲರೊಬ್ಬರ ನೌಕರನ ವಿರುದ್ಧ ತನಿಖೆ ನಡೆಸುವಂತೆ ದೆಹಲಿ ಬಾರ್ ಕೌನ್ಸಿಲ್ ಮತ್ತು ದೆಹಲಿ ಹೈಕೋರ್ಟ್ನ ಬಾರ್ ಅಸೋಸಿಯೇಷನ್ಗೆ ನಿರ್ದೇಶನ ನೀಡುವಂತೆ ಕೋರಿ ಈ ಅರ್ಜಿಯನ್ನು ಸಲ್ಲಿಸಲಾಗಿದೆ. ಆದರೆ ವಕೀಲರೊಬ್ಬರು ನೇಮಿಸಿಕೊಂಡಿರುವ ನೌಕರನ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರವನ್ನು ವಕೀಲರ ಸಂಘಕ್ಕೆ ನೀಡಲಾಗಿಲ್ಲ. ಹಾಗಾಗಿ ಈ ಅರ್ಜಿಯನ್ನು ವಜಾ ಮಾಡಲಾಗಿದೆ~ ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎ.ಕೆ.ಸಿಕ್ರಿ ನೇತೃತ್ವದ ನ್ಯಾಯಪೀಠ ಹೇಳಿತು.

ಸಾಮಾಜಿಕ ಕಾರ್ಯಕರ್ತ ಸಂಜಯ್ ಕುಮಾರ್ ಎಂಬುವವರು ಹೈಕೋರ್ಟ್ನಲ್ಲಿ ಪಿಐಎಲ್ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.