ಭಾನುವಾರ, ಆಗಸ್ಟ್ 1, 2021
27 °C

ಸಿಂಡಿಕೇಟ್ ಬ್ಯಾಂಕ್‌ನಿಂದ 200 ಹೊಸ ಶಾಖೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಆರ್ಥಿಕ ಸೇರ್ಪಡೆ’ ಕಾರ್ಯಕ್ರಮದ ಅಂಗವಾಗಿ ರಾಷ್ಟ್ರೀಕೃತ ಸಿಂಡಿಕೇಟ್ ಬ್ಯಾಂಕ್, 2011ರ ಮಾರ್ಚ್ ಅಂತ್ಯದ ಹೊತ್ತಿಗೆ 200 ಹೊಸ ಶಾಖೆಗಳನ್ನು ಆರಂಭಿಸಲು ನಿರ್ಧರಿಸಿದೆ. ದೇಶದಾದ್ಯಂತ ಸದ್ಯಕ್ಕೆ ಬ್ಯಾಂಕ್ 2,348 ಶಾಖೆಗಳ ಮೂಲಕ 24.5 ದಶಲಕ್ಷ ಗ್ರಾಹಕರಿಗೆ ಬ್ಯಾಂಕಿಂಗ್ ಸೇವೆ ಒದಗಿಸುತ್ತಿದೆ. 1928ರಲ್ಲಿಯೇ ಬ್ಯಾಂಕ್ ‘ಪಿಗ್ಮಿ ಠೇವಣಿ ಯೋಜನೆ’ ಮೂಲಕ ಎಲ್ಲರಿಗೂ ಬ್ಯಾಂಕಿಂಗ್ ಸೇವೆ ಕಲ್ಪಿಸುವ ಪರಿಕಲ್ಪನೆ ಜಾರಿಗೆ ತಂದಿತ್ತು.2000ಕ್ಕಿಂತ ಹೆಚ್ಚಿನ ಜನಸಂಖ್ಯೆ ಇರುವ ಗ್ರಾಮಗಳಿಗೆ ಬ್ಯಾಂಕಿಂಗ್ ಸೇವೆ ಕಲ್ಪಿಸುವ ‘ಆರ್ಥಿಕ ಸೇರ್ಪಡೆ’ ಕಾರ್ಯಕ್ರಮದಡಿ ಸಿಂಡಿಕೇಟ್ ಬ್ಯಾಂಕ್‌ಗೆ 2012ರ ಮಾರ್ಚ್ ತಿಂಗಳಾಂತ್ಯದ ಹೊತ್ತಿಗೆ 1,620 ಗ್ರಾಮಗಳಿಗೆ ಮತ್ತು 2000ಕ್ಕಿಂತ ಕಡಿಮೆ ಜನಸಂಖ್ಯೆ ಇರುವ 3,270 ಗ್ರಾಮಗಳಿಗೆ 2013ರ ಮಾರ್ಚ್ ಅಂತ್ಯದ ಹೊತ್ತಿಗೆ ಬ್ಯಾಂಕಿಂಗ್ ಸೇವೆ ಒದಗಿಸುವ ಗುರಿ ನಿಗದಿಪಡಿಸಲಾಗಿದೆ ಎಂದು ಬ್ಯಾಂಕ್‌ನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.