ಶುಕ್ರವಾರ, ಮೇ 7, 2021
24 °C

ಸಿಂದಗಿಯಲ್ಲಿ ಲಾಠಿ ಪ್ರಹಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಾಪುರ:ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಶಾಸಕ ರಮೇಶ ಭೂಸನೂರ ನೇತೃತ್ವದಲ್ಲಿ ಯುವಕರ ಗುಂಪೊಂದು ನೃತ್ಯ ಮಾಡುತ್ತಿದ್ದಾಗ ಒಂದು ಕೋಮಿನ ಜನರು ಕಲ್ಲು ತೂರಿದರು. ಇದರಿಂದಾಗಿ ನಿರ್ಮಾಣವಾದ ಉದ್ರಿಕ್ತ ವಾತಾವರಣ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ ಘಟನೆ ಬುಧವಾರ ರಾತ್ರಿ ಸಿಂದಗಿಯಲ್ಲಿ ನಡೆಯಿತು.ಗಣಪತಿ ವಿಸರ್ಜನೆಯ ಮೆರವಣಿಗೆ ಸಾಗುತ್ತಿದ್ದಾಗ ಈ ಘಟನೆ ನಡೆಯಿತು. ಪಟ್ಟಣದಲ್ಲಿ ವಾತಾವರಣ ಗಂಭೀರವಾಗಿದೆ. ಪೊಲೀಸರು ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಪಟ್ಟಣದ ಎಲ್ಲೆಡೆ ಪೊಲೀಸರು ಕಾವಲು ಕಾಯುತ್ತಿದ್ದಾರೆ. ಮೀಸಲು ಪಡೆ ಪೊಲೀಸರು ಬಿಡಾರ ಹೂಡಿದ್ದಾರೆ.ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಸ್ಥಿತಿಗತಿ ಪರಿಶೀಲನೆ ನಡೆಸುತ್ತಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.