ಸಿಂಧುಗೆ ವಿಡಿಯೊ ಟ್ವೀಟ್ ಮೂಲಕ ಶುಭಕೋರಿದ ವಿರಾಟ್ ಕೊಹ್ಲಿ

ರಿಯೊ ಒಲಿಂಪಿಕ್ಸ್ ಬ್ಯಾಡ್ಮಿಂಟನ್ ಮಹಿಳೆಯರ ಸಿಂಗಲ್ಸ್ನಲ್ಲಿ ಫೈನಲ್ ಪ್ರವೇಶಿಸಿರುವ ಭಾರತದ ಪಿ.ವಿ. ಸಿಂಧು ಅವರಿಗೆ ಕ್ರಿಕೆಟಿಗ ವಿರಾಟ್ ಕೊಹ್ಲಿ ವಿಡಿಯೊ ಟ್ವೀಟ್ ಮೂಲಕ ಶುಭಕೋರಿದ್ದಾರೆ.
‘ಒಲಿಂಪಿಕ್ಸ್ನಲ್ಲಿ ಫೈನಲ್ಗೆ ಲಗ್ಗೆ ಇಡುವ ಮೂಲಕ ನೀವು ದೇಶವೇ ಹೆಮ್ಮೆ ಪಡುವಂತೆ ಮಾಡಿದ್ದೀರಿ. ನೀವು ಚಿನ್ನಗೆದ್ದು ಬನ್ನಿ. ನಿಮಗೆ ಶುಭವಾಗಲಿ. ಆಲ್ ದಿ ಬೆಸ್ಟ್’ ಎಂದು ಕೊಹ್ಲಿ ವಿಡಿಯೊದಲ್ಲಿ ಹೇಳಿದ್ದಾರೆ.
ಈ ವಿಡಿಯೊ ಟ್ವೀಟ್ ಅನ್ನು 11 ಸಾವಿರಕ್ಕೂ ಹೆಚ್ಚು ಮಂದಿ ಲೈಕ್ ಮಾಡಿದ್ದಾರೆ. 3.5 ಸಾವಿರಕ್ಕೂ ಹೆಚ್ಚು ಮಂದಿ ರಿಟ್ವೀಟ್ ಮಾಡಿದ್ದಾರೆ.
All the very best @Pvsindhu1
This is gonna be an epic final clash! #JaiHind #Rio2016 pic.twitter.com/6mGCf0JzcZ
— Virat Kohli (@imVkohli) August 19, 2016
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.