ಶುಕ್ರವಾರ, ಮೇ 14, 2021
31 °C

ಸಿಇಟಿ ದಾಖಲೆ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶ ಬಯಸಿರುವ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ಕಾರ್ಯ ರಾಜ್ಯದ 13 ಕೇಂದ್ರಗಳಲ್ಲಿ ಸುಸೂತ್ರವಾಗಿ ನಡೆಯುತ್ತಿದೆ.ಶುಕ್ರವಾರ 5001ರಿಂದ 10 ಸಾವಿರದ ರ‌್ಯಾಂಕ್‌ವರೆಗಿನ ವಿದ್ಯಾರ್ಥಿಗಳ ಮೂಲದಾಖಲೆಗಳ ಪರಿಶೀಲನೆ ನಡೆಯಿತು. ಶನಿವಾರ 10001ರಿಂದ 15 ಸಾವಿರದ ರ‌್ಯಾಂಕ್‌ವರೆಗಿನ ವಿದ್ಯಾರ್ಥಿಗಳಿಗೆ ನಿಗದಿತ ಕೇಂದ್ರಗಳಲ್ಲಿ ಮೂಲ ದಾಖಲೆಗಳ ಪರಿಶೀಲನೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.ಶುಕ್ರವಾರ ಮೂವರು ವಿದ್ಯಾರ್ಥಿಗಳು ಖದ್ದಾಗಿ ಹಾಜರಾಗಿರಲಿಲ್ಲ. ಅವರ ಪೋಷಕರು ದಾಖಲಾತಿಗಳ ಪರಿಶೀಲನೆಗೆ ಬಂದಿದ್ದರು. ಅನಾರೋಗ್ಯ, ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಿರುವುದು ಇತ್ಯಾದಿ ಸಂದರ್ಭಗಳಲ್ಲಿ ಅಭ್ಯರ್ಥಿಗಳಿಗೆ ಖುದ್ದು ಹಾಜರಿಯಿಂದ ವಿನಾಯಿತಿ ನೀಡಲಾಗುತ್ತದೆ. ಕಳೆದ ವರ್ಷವೂ ಇದಕ್ಕೆ ಅವಕಾಶ ಕಲ್ಪಿಸಲಾಗಿತ್ತು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ   ಎಸ್. ಪಿ.ಕುಲಕರ್ಣಿ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.