ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ನಡೆದ ಅಕ್ರಮಗಳ ಕುರಿತು ತನಿಖೆ ನಡೆಸುತ್ತಿರುವ ಸಿಐಡಿ, ಹೊರರಾಜ್ಯ ವಿದ್ಯಾರ್ಥಿಗಳ ಸಂಪೂರ್ಣ ಮಾಹಿತಿ ಸಲ್ಲಿಸುವಂತೆ ಕಾಮೆಡ್–ಕೆ ವ್ಯಾಪ್ತಿಯಲ್ಲಿರುವ ವೈದ್ಯಕೀಯ ಕಾಲೇಜುಗಳಿಗೆ ನೋಟಿಸ್ ಜಾರಿ ಮಾಡಿದೆ.

ಕಾಮೆಡ್–ಕೆ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳನ್ನು ಬೆಂಗಳೂರು ಅಂತರರಾಷ್ಟ್ರೀಯ ವಿಮಾನನಿಲ್ದಾಣ ಪೊಲೀಸರು ಪತ್ತೆ ಮಾಡಿದ್ದರು. ನಂತರ ಸಮಗ್ರ ತನಿಖೆಗಾಗಿ ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ ಒಪ್ಪಿಸಿತ್ತು.

ಈಗ ಸಿಐಡಿ, 14 ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ದಾಖಲಾಗಿರುವ ಹೊರರಾಜ್ಯ ವಿದ್ಯಾರ್ಥಿಗಳ ಕುರಿತು ಸಂಪೂರ್ಣ ವಿವರಗಳನ್ನು ಸಂಗ್ರಹಿಸುತ್ತಿದೆ.

ಡಿಸೆಂಬರ್ 7ಕ್ಕೆ ಬೆಳಗಾವಿಯ ಜವಾಹರಲಾಲ್ ನೆಹರು ವೈದ್ಯಕೀಯ ಕಾಲೇಜಿಗೆ ನೋಟಿಸ್ ಕಳುಹಿಸಿದೆ. ಈ ನೋಟಿಸ್ನಲ್ಲಿ 2008ರಿಂದ 2013ರವರೆಗೆ ಪ್ರಥಮ ವರ್ಷದ ಎಂಬಿಬಿಎಸ್ ಕೋರ್ಸ್ಗೆ ದಾಖಲಾಗಿರುವ ಹೊರರಾಜ್ಯ ವಿದ್ಯಾರ್ಥಿಗಳ ಸಂಪೂರ್ಣ ವಿವರ ಸಲ್ಲಿಸುವಂತೆ ಸೂಚಿಸಿದೆ.

ವಿದ್ಯಾರ್ಥಿಗಳು ಕಾಲೇಜಿಗೆ ದಾಖಲಾದ ದಿನದಿಂದ ನಡೆದ ಎಲ್ಲ ಪರೀಕ್ಷೆಗಳಲ್ಲಿ ಗಳಿಸಿರುವ ಅಂಕಗಳ ವಿವರಗಳು, ಮೊಬೈಲ್ ದೂರವಾಣಿ ಸಂಖ್ಯೆ, ವೈದ್ಯಕೀಯ ಸೀಟುಗಳ ಹಂಚಿಕೆ ಪ್ರಕ್ರಿಯೆಯಲ್ಲಿ ಹಿಂತಿರುಗಿಸಿದ ಸೀಟುಗಳನ್ನು ಪಡೆದಿರುವ ವಿದ್ಯಾರ್ಥಿ ವಿವರ, ನೋಂದಣಿ ಸಂಖ್ಯೆ, ಕಾಮೆಡ್–ಕೆ ರ್ಯಾಂಕ್ ಮತ್ತು ಕಾಲೇಜಿಗೆ ದಾಖಲಾಗುವ ಸಂದರ್ಭದಲ್ಲಿ ನಡೆದ ಸಂದರ್ಶನದ ವಿವರ ಸಲ್ಲಿಸಬೇಕು ಎಂದು ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.