ಶುಕ್ರವಾರ, ಜೂನ್ 25, 2021
29 °C

ಸಿಇಟಿ ಶುಲ್ಕ ಪಾವತಿ ಅವಧಿ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಶುಲ್ಕ ಪಾವತಿಸುವ ಅವಧಿಯನ್ನು ಇದೇ 20ರವರೆಗೆ ವಿಸ್ತರಿಸಲಾಗಿದೆ. ರಾಜ್ಯದ ಒಳಗೆ ಮತ್ತು ಹೊರಗೆ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಇದುವರೆಗೆ ಶುಲ್ಕ ಪಾವತಿಸದೆ ಇದ್ದಲ್ಲಿ, ಈಗಲೂ ಪಾವತಿ ಮಾಡಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ. ಕೈಪಿಡಿ ಮತ್ತು ಅರ್ಜಿ ನಮೂನೆಗಾಗಿ ₨ 750 ಮೊತ್ತದ (ಅಂಚೆ ವೆಚ್ಚ ಸೇರಿ) ಡಿ.ಡಿ.ಯನ್ನು ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಇವರ ಹೆಸರಿನಲ್ಲಿ ಪಡೆದು ಸ್ಪೀಡ್‌ ಪೋಸ್ಟ್‌ ಮೂಲಕ ಪ್ರಾಧಿಕಾರಕ್ಕೆ ಕಳುಹಿಸಬೇಕು. ಸ್ವವಿಳಾಸದ ಲಕೋಟೆಯೊಂದಿಗೆ ಡಿ.ಡಿ. ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.