ಬೆಂಗಳೂರು: ಕಳೆದ ವರ್ಷ ಸರ್ಕಾರ ಮತ್ತು ಕಾಮೆಡ್-ಕೆ ನಡುವೆ ನಡೆದಿದ್ದ ಸರ್ವಸಮ್ಮತ ಸೀಟು ಹಂಚಿಕೆ ಒಪ್ಪಂದಕ್ಕೆ ಸುಪ್ರೀಂ ಕೋರ್ಟ್ ಇನ್ನೂ ಅನುಮತಿ ನೀಡದ ಕಾರಣ ಖಾಸಗಿ ವೃತ್ತಿಶಿಕ್ಷಣ ಸಂಸ್ಥೆಗಳ ಒಕ್ಕೂಟ ಕಾಮೆಡ್-ಕೆ ಮತ್ತು ಸರ್ಕಾರದ ಮಧ್ಯೆ ನಡೆಯಬೇಕಿದ್ದ 2011-12ನೇ ಸಾಲಿನ ಸೀಟು ಹಂಚಿಕೆ ಮಾತುಕತೆ ವಿಳಂಬವಾಗುವ ಸಾಧ್ಯತೆ ಇದೆ.

ಸುಪ್ರೀಂ ಕೋರ್ಟ್ ಕಲಾಪಗಳಿಗೆ ಡಿ.20ರಿಂದ ಜನವರಿ 2ರವರೆಗೆ ರಜೆ ಇರುವ ಕಾರಣ ಅದಕ್ಕೂ ಮುನ್ನ ಅನುಮತಿ ದೊರೆಯುವುದು ಅಸಾಧ್ಯ. ಹೀಗಾಗಿ ಸರ್ಕಾರ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ನಡುವೆ ಸೀಟು ಹಂಚಿಕೆ ಮಾತುಕತೆ ಜನವರಿಗಿಂತ ಮೊದಲು ನಡೆಯುವುದು ಅನುಮಾನ ಎಂದು ಮೂಲಗಳು ತಿಳಿಸಿವೆ.

ಖಾಸಗಿ ಶಿಕ್ಷಣ ಸಂಸ್ಥೆಗಳು ಮತ್ತು ರಾಜ್ಯ ಸರ್ಕಾರ ಮಾಡಿಕೊಂಡಿದ್ದ 2010-11ನೇ ಸಾಲಿನ ಸರ್ವಸಮ್ಮತ ಒಪ್ಪಂದದ ಕುರಿತ ವಿಚಾರಣೆ ಕಳೆದ ವಾರ ಸುಪ್ರೀಂ ಕೋರ್ಟ್ ಮುಂದೆ ಬಂದಾಗ ಹೆಚ್ಚಿನ ದಾಖಲೆಗಳನ್ನು ಹಾಜರುಪಡಿಸುವಂತೆ ಕೋರ್ಟ್ ಸೂಚಿಸಿದೆ ಎಂದು ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಸರ್ವಸಮ್ಮತ ಒಪ್ಪಂದಕ್ಕೆ ಸುಪ್ರೀಂ ಕೋರ್ಟ್ನ ಅನುಮತಿ ದೊರೆತ ನಂತರವಷ್ಟೇ ಸೀಟು ಹಂಚಿಕೆ ಕುರಿತ ಮಾತುಕತೆ ಮುಂದುವರಿಯಲು ಸಾಧ್ಯ ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರಕ್ಕೆ ತಿಳಿಸಿವೆ. ಇದರಿಂದಾಗಿ ಭಾರತೀಯ ದಂತವೈದ್ಯಕೀಯ ಮಂಡಳಿಯ (ಡಿಸಿಐ) ನಿಯಮಗಳಿಗೆ ವ್ಯತಿರಿಕ್ತವಾಗಿ ನಡೆದಿರುವ ಸುಮಾರು 1,100 ದಂತ ವೈದ್ಯಕೀಯ ಶಿಕ್ಷಣ ವಿದ್ಯಾರ್ಥಿಗಳ ಪ್ರವೇಶ ಅತಂತ್ರ ಸ್ಥಿತಿಯಲ್ಲಿದೆ. ಸರ್ವಸಮ್ಮತ ಒಪ್ಪಂದಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದ ನಂತರವಷ್ಟೇ ದಂತ ವೈದ್ಯಕೀಯ ವಿದ್ಯಾರ್ಥಿಗಳ ಪ್ರವೇಶಾತಿಗೆ ಅನುಮೋದನೆ ನೀಡುವುದಾಗಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಈಗಾಗಲೇ ಸ್ಪಷ್ಟಪಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.