ಶುಕ್ರವಾರ, ಜೂನ್ 18, 2021
22 °C

ಸಿಇಸಿ ಅಕ್ರಮ ಗಣಿ ವಿಚಾರಣೆ: ಯಡಿಯೂರಪ್ಪಗೆ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಅಕ್ರಮ ಗಣಿಗಾರಿಕೆ ಕುರಿತು ವಿಚಾರಣೆ ನಡೆಸುತ್ತಿರುವ ಕೇಂದ್ರ ಉನ್ನತಾಧಿಕಾರ ಸಮಿತಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅದಾನಿ ಎಂಟರ್‌ಪ್ರೈಸಸ್‌ಗೆ ನೋಟಿಸ್ ನೀಡಲಾಗಿದೆ.ಮಾರ್ಚ್ 20ರಂದು ಮಂಗಳವಾರ ವೈಯಕ್ತಿಕವಾಗಿ, ಇಲ್ಲವೇ ಅಧಿಕೃತ ಪ್ರತಿನಿಧಿ ಮೂಲಕ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ಮಾಜಿ ಮುಖ್ಯಮಂತ್ರಿಗೆ ಸೂಚಿಸಲಾಗಿದೆ. ಪ್ರತಿಷ್ಠಿತ ಕಾರ್ಪೊರೇಟ್ ಸಂಸ್ಥೆಗಳಾದ ಜೆಎಸ್‌ಡಬ್ಲ್ಯು ಹಾಗೂ ಎಸ್‌ಡಬ್ಲ್ಯುಎಂಸಿಯಿಂದ ದೇಣಿಗೆ ಪಡೆದ ಆರೋಪಕ್ಕೆ ಯಡಿಯೂರಪ್ಪ ಒಳಗಾಗಿದ್ದಾರೆ. ಉತ್ತರ ಕನ್ನಡದ ಬೇಲಿಕೇರಿ ಬಂದರಿನಲ್ಲಿ ವಶಪಡಿಸಿಕೊಳ್ಳಲಾಗಿದ್ದ 5.5 ಲಕ್ಷ ಟನ್ ಅದಿರನ್ನು ಕಳವು ಮಾಡಿ ರಫ್ತು ಮಾಡಿದ ಆರೋಪವನ್ನು ಅದಾನಿ ಎಂಟರ್‌ಪ್ರೈಸಸ್ ಎದುರಿಸುತ್ತಿದೆ.ಪ್ರತಿಷ್ಠಿತ ಕಾರ್ಪೊರೇಟ್ ಸಂಸ್ಥೆಗಳಿಗೆ ಗಣಿ ಗುತ್ತಿಗೆ ಪರವಾನಗಿ ಶಿಫಾರಸು ಮಾಡಲು ಯಡಿಯೂರಪ್ಪ ಮತ್ತು ಅವರ ಕುಟುಂಬದ ಸದಸ್ಯರ ಪ್ರೇರಣಾ ಟ್ರಸ್ಟ್ ಮತ್ತು ಧವಳಗಿರಿ ಡೆವಲಪರ್ಸ್ ಲಾಭ ಪಡೆದಿದ್ದು, ಈ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಮನವಿ ಮಾಡಿ ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಡುತ್ತಿರುವ ಧಾರವಾಡದ ಸಮಾಜ ಪರಿವರ್ತನಾ ಸಮುದಾಯ (ಎಸ್‌ಪಿಎಸ್) ಸುಪ್ರೀಂಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.