ನವದೆಹಲಿ: ಗಣಿ ಗುತ್ತಿಗೆ ನೀಡುವಾಗ ಕೆಲ ಖಾಸಗಿ ಕಂಪೆನಿಗಳಿಗೆ ಅನುಕೂಲ ಮಾಡಿಕೊಡಲಾಗಿದೆ ಎಂಬ ತಮ್ಮ ವಿರುದ್ಧದ ಲೋಕಾಯುಕ್ತ ವರದಿಯ ಕೆಲ ಭಾಗಗಳನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಈ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಸುವ ಅಗತ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೇಂದ್ರ ಉನ್ನತಾಧಿಕಾರ ಸಮಿತಿಗೆ (ಸಿಇಸಿ) ತಿಳಿಸಿದ್ದಾರೆ.

`ಸಿಇಸಿ~ ಮುಂದೆ ಸೋಮವಾರ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಯಡಿಯೂರಪ್ಪ ತಮ್ಮ ವಾದ ಮುಂದಿಟ್ಟಿದ್ದಾರೆ.
ಲೋಕಾಯುಕ್ತ ಸಲ್ಲಿಸಿರುವ ಪ್ರಥಮ ಮಾಹಿತಿ ವರದಿಯನ್ನು (ಎಫ್.ಐ.ಆರ್) ಹೈಕೋರ್ಟ್ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತದಿಂದ ಸಿಬಿಐಗೆ ಪ್ರಕರಣ ವರ್ಗಾಯಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ತನಿಖಾಧಿಕಾರಿಗಳು ತಮ್ಮ ವಿರುದ್ಧ ಮಾಡಿರುವ ಆರೋಪ ಸಮರ್ಥಿಸುವಂತಹ ದಾಖಲೆಗಳನ್ನು ಒದಗಿಸಿಲ್ಲ ಎಂದು ಎಫ್ಐಆರ್ ವಜಾಗೊಳಿಸುವಾಗ ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ ಎಂದೂ ಬಿಎಸ್ವೈ ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ.

ಗಣಿ ಗುತ್ತಿಗೆ ಪಡೆಯಲು ತಮ್ಮ ಕುಟುಂಬ ವರ್ಗಕ್ಕೆ ಸೇರಿದ ಟ್ರಸ್ಟ್ಗೆ ಗಣಿ ಕಂಪೆನಿಗಳು ಹಣ ಪಾವತಿಸಿವೆ ಎಂದು ಧಾರವಾಡ ಮೂಲದ ಸರ್ಕಾರೇತರ ಸಂಸ್ಥೆ `ಸಮಾಜ ಪರಿವರ್ತನ ಸಮುದಾಯ~ ಮಾಡಿದ ಆರೋಪವನ್ನು ಅಲ್ಲಗಳೆದಿರುವ ಅವರು, ತಮ್ಮ ವಿರುದ್ಧ ಸಿಬಿಐ ತನಿಖೆ ನಡೆಸಬೇಕು ಎಂಬ ಆಗ್ರಹದ ಹಿಂದೆ ರಾಜಕೀಯ ದುರುದ್ದೇಶವಿದೆ ಎಂದಿದ್ದಾರೆ.

ತಮ್ಮ ಕುಟುಂಬ ಸದಸ್ಯರು ನಡೆಸುತ್ತಿರುವ ಪ್ರೇರಣಾ ಎಜುಕೇಶನ್ ಟ್ರಸ್ಟ್ಗೆ `ಸೌತ್ ವೆಸ್ಟ್ ಮೈನಿಂಗ್ ಕಂಪೆನಿ~ (ಎಸ್ಡಬ್ಲುಎಂಎಲ್) 30 ಕೋಟಿ ರೂಪಾಯಿ ಪಾವತಿಸಿದೆ ಎಂಬ ಆರೋಪ ತಳ್ಳಿಹಾಕಿರುವ ಯಡಿಯೂರಪ್ಪ ಅದೊಂದು ಸಾರ್ವಜನಿಕ ಟ್ರಸ್ಟ್ ಆಗಿದ್ದು, ಹಣ ದೇಣಿಗೆಯ ರೂಪದಲ್ಲಿ ಬಂದಿದೆ. ತಮ್ಮ ಪುತ್ರರು ಆ ಟ್ರಸ್ಟ್ನ ಸದಸ್ಯರಾಗಿದ್ದಾರೆ ಅಷ್ಟೇ.

ಇದರ ಹೊರತಾಗಿ ಆ ಸಂಸ್ಥೆಯ ವ್ಯವಹಾರಕ್ಕೂ ತಮಗೂ ಸಂಬಂಧವಿಲ್ಲ. ಅಲ್ಲದೇ ತಾವು ಮುಖ್ಯಮಂತ್ರಿಯಾಗಿದ್ದಾಗ `ಎಸ್ಡಬ್ಲುಎಂಎಲ್~ಗೆ ಯಾವುದೇ ಗಣಿ ಗುತ್ತಿಗೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರವೀಣ್ಚಂದ್ರ ಎಂಬುವವರಿಗೆ ಗಣಿ ಗುತ್ತಿಗೆಗೆ ಅನುಮತಿ ನೀಡಿರುವ ಕುರಿತು ಪ್ರಮಾಣಪತ್ರದಲ್ಲಿ ಹೇಳಿರುವ ಅವರು, ಈ ವಿಚಾರ ಈಗಾಗಲೇ ಬೆಂಗಳೂರು ನ್ಯಾಯಾಲಯದ ಮುಂದೆ ಇದೆ. ಸಂಬಂಧಿಸಿದ ವ್ಯಕ್ತಿಗಳಿಗೆ ಸಮನ್ಸ್ ಕಳುಹಿಸಲಾಗಿದೆ. ಕೋರ್ಟ್ ವಿಚಾರಣೆ ನಡೆಸುತ್ತಿರುವಾಗ ಸಿಬಿಐ ತನಿಖೆಗೆ ಒತ್ತಾಯಿಸುವುದರಲ್ಲಿ ಅರ್ಥವಿಲ್ಲ ಎಂದೂ ಹೇಳಿದ್ದಾರೆ.

ಗಣಿ ಗುತ್ತಿಗೆ ಪಡೆದಿದ್ದ ಪ್ರವೀಣ್ ಚಂದ್ರ, ಮೆಸರ್ಸ್ ಭಗತ್ ಹೋಮ್ಸ ಪ್ರೈವೇಟ್ ಲಿಮಿಟೆಡ್ಗೆ 2.5 ಕೋಟಿ ಹಾಗೂ ಧವಳಗಿರಿ ಪ್ರಾಪರ್ಟಿ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ಗೆ 3.5 ಕೋಟಿ ರೂಪಾಯಿ ಪಾವತಿಸಿದ್ದರು. ಈ ಎರಡೂ ಕಂಪೆನಿಗಳ ನಿರ್ದೇಶಕರು ಯಡಿಯೂರಪ್ಪ ಅವರ ಹತ್ತಿರದ ಸಂಬಂಧಿಗಳು. ಈ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಸಮಾಜ ಪರಿವರ್ತನ ಸಮುದಾಯ ಒತ್ತಾಯಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.