ಸಿಇಸಿ ಶಿಫಾರಸು: ಇಂದು ಸುಪ್ರೀಂ ತೀರ್ಪು

7

ಸಿಇಸಿ ಶಿಫಾರಸು: ಇಂದು ಸುಪ್ರೀಂ ತೀರ್ಪು

Published:
Updated:

ನವದೆಹಲಿ: ಭ್ರಷ್ಟಾಚಾರದ ಆರೋಪಕ್ಕೆ ಒಳಗಾಗಿ ಮುಖ್ಯಮಂತ್ರಿ ಪದವಿ ಕಳೆದುಕೊಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಭವಿಷ್ಯವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ನಿರ್ಧರಿಸಲಿದೆ.ಗಣಿ ಕಂಪೆನಿಗಳಿಂದ `ದೇಣಿಗೆ~ ಪಡೆದ ಹಾಗೂ ಭೂಸ್ವಾಧೀನ ಅಧಿಸೂಚನೆಯನ್ನು ಕಾನೂನುಬಾಹಿರವಾಗಿ ರದ್ದು ಮಾಡಿದ ಆರೋಪಕ್ಕೆ ಒಳಗಾಗಿರುವ ಯಡಿಯೂರಪ್ಪ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಕೇಂದ್ರ ಉನ್ನತಾಧಿಕಾರ ಸಮಿತಿ (ಸಿಇಸಿ) ಮಾಡಿರುವ ಶಿಫಾರಸು ಕುರಿತು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎಚ್. ಕಪಾಡಿಯಾ ನೇತೃತ್ವದ ತ್ರಿಸದಸ್ಯ ಅರಣ್ಯ ಪೀಠ ತೀರ್ಪು ನೀಡಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry