ಗುರುವಾರ , ಅಕ್ಟೋಬರ್ 17, 2019
21 °C

ಸಿಎಂಗೆ ಶಾಸಕರ ಅಭಿನಂದನೆ

Published:
Updated:

ಕೊಪ್ಪಳ: ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ವಿಸ್ತೃತ ಯೋಜನೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡುವ ರಾಜ್ಯ ಸರ್ಕಾರ ಉತ್ತರ ಕರ್ನಾಟಕದ ರೈತರ ಭವಿಷ್ಯಕ್ಕೆ ಶಕ್ತಿ ತುಂಬುವ ಕೆಲಸ ಮಾಡಿದೆ ಎಂದು ಜಿಲ್ಲೆಯ ಶಾಸಕರು ಅಭಿಪ್ರಾಯಪಟ್ಟಿದ್ದಾರೆ.ಯೋಜನೆಗೆ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಈಚೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಹಾಗೂ ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮೋಯಿ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ನಂತರ ಮಾತನಾಡಿದ ಜಿಲ್ಲೆಯ ಶಾಸಕರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಈ ಯೋಜನೆಯಿಂದ ಬಾಗಲಕೋಟೆ, ವಿಜಾಪುರ, ಕೊಪ್ಪಳ, ಗುಲ್ಬರ್ಗ, ಯಾದಗಿರಿ, ರಾಯಚೂರು ಮತ್ತು ಗದಗ ಜಿಲ್ಲೆಗಳ ರೈತರ ಬದುಕು ಹಸನಾಗಲಿದೆ. ಜಿಲ್ಲೆಯ ಬರಪೀಡಿತ ತಾಲ್ಲೂಕುಗಳಾದ ಕುಷ್ಟಗಿ, ಯಲಬುರ್ಗಾ ಹಾಗೂ ಕೊಪ್ಪಳ ತಾಲ್ಲೂಕಿನ ರೈತರಿಗೆ ಈ ಯೋಜನೆ ವರವಾಗಿ ಪರಿಣಮಿಸಲಿದೆ ಎಂದೂ ಶಾಸಕರು ಅಭಿಪ್ರಾಯಪಟ್ಟರು.ಈ ಯೋಜನೆಯಡಿ ಜಿಲ್ಲೆಗೆ ಲಭ್ಯವಾಗಲಿರುವ 11.5 ಟಿಎಂಸಿ ನೀರನ್ನು ಬಳಸಿಕೊಳ್ಳಲು ಅನುಕೂಲವಾಗುವಂತೆ ಶೀಘ್ರವೇ ಸಂಬಂಧಿಸಿದಂತೆ ಕಾಮಗಾರಿಗೆ ಚಾಲನೆ ನೀಡುವಂತೆ ಜಿಲ್ಲೆಯ ಶಾಸಕರು ಮಾಡಿದ ಮನವಿಗೆ  ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ಮೂಡಿದೆ ಎಂದೂ ಸಂತಸ ವ್ಯಕ್ತಪಡಿಸಿದ್ದಾರೆ.ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮೋಯಿ ಅವರನ್ನು ಬೆಂಗಳೂರಿನಲ್ಲಿ ಅಭಿನಂದನೆ ಸಲ್ಲಿಸಲಾಗಿದೆ ಎಂದು ಕೊಪ್ಪಳ ಶಾಸಕ ಸಂಗಣ್ಣ ಕರಡಿ, ಶಾಸಕ (ವಿಧಾನಪರಿಷತ್) ಹಾಲಪ್ಪ ಆಚಾರ್, ಅಮರೇಗೌಡ ಬಯ್ಯೊಪುರ ಅವರು  ಸಂತಸ ವ್ಯಕ್ತಪಡಿಸಿದ್ದಾರೆ.ಶಾಸಕರಾದ ಸಂಗಣ್ಣ ಕರಡಿ, ಅಮರೇಗೌಡ ಬಯ್ಯೊಪುರ, ವಿಧಾನ ಪರಿಷತ್ ಸದಸ್ಯ ಹಾಲಪ್ಪ ಆಚಾರ್ ಅವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಗೋವಿಂದ ಕಾರಜೋಳ, ಕಾನೂನು ಸಚಿವ ಸುರೇಶ್‌ಕುಮಾರ್ ಮತ್ತಿತರರು ಉಪಸ್ಥಿತರಿದ್ದರು ಎಂದು ಪ್ರಕಟಣೆ ತಿಳಿಸಿದೆ.

Post Comments (+)