ಶನಿವಾರ, ಮೇ 21, 2022
22 °C

ಸಿ.ಎಂ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಉದ್ಯಮ ಆರಂಭಿಸಲು ಹೂಡಿಕೆದಾರರಿಗೆ ಅಗತ್ಯವಾದ ಎಲ್ಲ ಸೌಕರ್ಯಗಳನ್ನು ಕಲ್ಪಿಸಲು ರಾಜ್ಯ ಸರ್ಕಾರ ಬದ್ಧವಿದೆ. ವೈಮಾಂತರಿಕ್ಷ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ರಾಜ್ಯದಲ್ಲಿ ಉತ್ತಮ ಅವಕಾಶಗಳಿದ್ದು, ಇವುಗಳನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿ  ಯಡಿಯೂರಪ್ಪ ಕರೆ ನೀಡಿದರು.ಯಲಹಂಕ ವಾಯುನೆಲೆಯಲ್ಲಿ ಆರಂಭವಾದ ‘ಏರೊ ಇಂಡಿಯಾ’ ಪ್ರದರ್ಶನದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.‘ಹೂಡಿಕೆದಾರರನ್ನು ಆಕರ್ಷಿಸಲು ಮುಂದಿನ ವರ್ಷದ ಮೇ ತಿಂಗಳಿನಲ್ಲಿ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಏರ್ಪಡಿಸಲಾಗಿದೆ’ ಎಂದರು.

ರಕ್ಷಣಾ ಖಾತೆ ರಾಜ್ಯ ಸಚಿವ ಎಂ.ಎಂ. ಪಲ್ಲಂ ರಾಜು, ವಾಯುಪಡೆ ಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಪಿ.ವಿ. ನಾಯಕ್, ರಕ್ಷಣಾ ಕಾರ್ಯದರ್ಶಿ ಪ್ರದೀಪ್ ಕುಮಾರ್, ರಕ್ಷಣಾ ಉತ್ಪಾದನಾ ವಿಭಾಗದ ಕಾರ್ಯದರ್ಶಿ ಆರ್.ಕೆ.ಸಿಂಗ್ ವೇದಿಕೆಯಲ್ಲಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.