ಸೋಮವಾರ, ಮೇ 23, 2022
30 °C

ಸಿಎಂ ಇಂದು ದೆಹಲಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹೈದರಾಬಾದ್ ಕರ್ನಾಟಕಕ್ಕೆ ಸಂವಿಧಾನದ 371ನೇ ಕಲಂ ಪ್ರಕಾರ ವಿಶೇಷ ಸ್ಥಾನಮಾನ ನೀಡುವಂತೆ ಒತ್ತಾಯಿಸಲು ಪ್ರತಿಪಕ್ಷ ನಾಯಕರ ನಿಯೋಗದೊಂದಿಗೆ ದೆಹಲಿಗೆ ತೆರಳಿ ಸೋಮವಾರ ಪ್ರಧಾನಿಯವರನ್ನು ಭೇಟಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಇಲ್ಲಿ ತಿಳಿಸಿದರು.ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಹೊರ ಬಂದ ನಂತರ ಅವರು ಸುದ್ದಿಗಾರರಿಗೆ ಈ ಮಾಹಿತಿ ನೀಡಿದರು.‘ಭಾನುವಾರ ಸಂಜೆಯೇ ನಾನು ದೆಹಲಿಗೆ ಹೋಗುತ್ತಿದ್ದೇನೆ. ಸೋಮವಾರ ಮಧ್ಯಾಹ್ನ 12.30ಕ್ಕೆ ಪ್ರಧಾನ ಮಂತ್ರಿ ಡಾ.ಮನಮೋಹನಸಿಂಗ್ ಅವರು ಭೇಟಿಗೆ ಸಮಯ ಕೊಟ್ಟಿದ್ದಾರೆ. ಆ ಸಂದರ್ಭದಲ್ಲಿ ಹಿಂದುಳಿದ ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಕೋರಿಕೆ ಸಲ್ಲಿಸಲಾಗುವುದು. ಈ ನಿಯೋಗದಲ್ಲಿ ವಿಧಾನಮಂಡಲದ ಪ್ರತಿಪಕ್ಷ ನಾಯಕರು ಮತ್ತು ಕೆಲವು ಸಚಿವರೂ ಇರುತ್ತಾರೆ’ ಎಂದರು.ಇದೇ ಸಂದರ್ಭದಲ್ಲಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಬಗ್ಗೆಯೂ ಗಮನ ಸೆಳೆಯಲಾಗುವುದು. ನಂತರ ಕೇಂದ್ರ ಕೃಷಿ ಸಚಿವ ಶರದ್ ಪವಾರ್, ಹಣಕಾಸು ಸಚಿವ ಪ್ರಣವ್ ಮುಖರ್ಜಿ, ಗೃಹ ಸಚಿವ ಪಿ.ಚಿದಂಬರಂ ಅವರನ್ನೂ ಭೇಟಿ ಮಾಡಲಾಗುವುದು ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.