ಮಂಗಳವಾರ, ಮೇ 11, 2021
25 °C

ಸಿಎಂ ನಿರ್ಲಕ್ಷ್ಯ ಧೋರಣೆಗೆ ಖಂಡನೆ:ಮೇನಲ್ಲಿ ಸಕ್ಕರೆ ಕಾರ್ಖಾನೆ ಎದುರು ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮದ್ದೂರು: ಕಬ್ಬಿಗೆ ವೈಜ್ಞಾನಿಕವಾಗಿ ದರ ನಿಗದಿಗೊಳಿಸಲು ಮೀನಾಮೇಷ ಎಣಿಸುತ್ತಿರುವ ಮುಖ್ಯಮಂತ್ರಿಗಳ ನಿರ್ಲಕ್ಷ್ಯ ಧೋರಣೆ ಖಂಡಿಸಿ ಮೇ ಮೊದಲ ವಾರದಲ್ಲಿ ಮಂಡ್ಯ ಜಿಲ್ಲಾ ರೈತ ಮತ್ತು ಕೃಷಿ ಕಾರ್ಮಿಕ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲೆಯ ಎಲ್ಲಾ ಸಕ್ಕರೆ ಕಾರ್ಖಾನೆಗಳ ಎದುರು ನಿರಂತರ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ದೇಶಹಳ್ಳಿ ಆರ್.ಮೋಹನಕುಮಾರ್ ಶುಕ್ರವಾರ ತಿಳಿಸಿದರು.

 

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬ್ಲಾಕ್ ಸಮಿತಿ ಅಧ್ಯಕ್ಷರನ್ನಾಗಿ ತೂಬಿನಕೆರೆಯ ಟಿ.ಲಿಂಗಯ್ಯ ಅವರನ್ನು ಆಯ್ಕೆಗೊಳಿಸಿ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕಳೆದ ಸಾಲಿನಲ್ಲಿ ಅರೆದ ಕಬ್ಬಿಗೆ ಇಳುವರಿ ಆಧಾರದ ಮೇಲೆ ದರ ನಿಗದಿ ಮಾಡುವುದಾಗಿ ಘೋಷಿಸಿದ್ದ ಮುಖ್ಯಮಂತ್ರಿಗಳು ಇದುವರೆಗೂ ದರ ನಿಗದಿ ಮಾಡಿಲ್ಲ.

 

ಈ ಸಾಲಿನಲ್ಲಿ ಕಬ್ಬು ಕಟಾವು ಮುಗಿಯುತ್ತಾ ಬಂದಿದ್ದರೂ ಕಬ್ಬು ದರ ನಿಗದಿಗೆ ಇನ್ನು ಮುಂದಾಗದಿರುವುದು ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಸಂಚಾಲಕ ಕೊಟ್ಟಿಗೆ ಪುಟ್ಟಸ್ವಾಮಿ, ತಾಲ್ಲೂಕು ಪಂಚಾಯಿತಿ ಸದಸ್ಯ ಸಿ.ನಾಗೇಗೌಡ, ಎಸ್‌ಸಿ/ಎಸ್‌ಟಿ ವಿಭಾಗದ ಜಿಲ್ಲಾ ಉಪಾಧ್ಯಕ್ಷ ಜಿ.ಬಿ.ಶಂಕರ್, ಪದಾಧಿಕಾರಿಗಳಾದ ಎಂ.ರಾಜೇಶ್, ಸಿ.ಎಸ್.ಉಮೇಶ್, ನಾಗೇಶ್ ಹಾಜರಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.