ನವದೆಹಲಿ: ನೀರು ಹಂಚಿಕೆ ವಿವಾದ ಬಗೆಹರಿಸುವಂತೆ ಪ್ರಧಾನಿ ನೇತೃತ್ವದ `ಕಾವೇರಿ ನದಿ ಪ್ರಾಧಿಕಾರ'ಕ್ಕೆ (ಅಇಆರ್ಎ) ಪದೇ ಪದೇ ಸೂಚಿಸಲು ಸಾಧ್ಯವಿಲ್ಲ ಎಂದು ಸೋಮವಾರ ಸ್ಪಷ್ಟಪಡಿಸಿರುವ ಸುಪ್ರೀಂ ಕೋರ್ಟ್, ಕರ್ನಾಟಕ ಮತ್ತು ತಮಿಳುನಾಡು ಮುಖ್ಯಮಂತ್ರಿಗಳು ಖುದ್ದು ಭೇಟಿ ಮಾಡಿ ಸಮಸ್ಯೆಗೆ ಸರ್ವಸಮ್ಮತ ಪರಿಹಾರ ಕಂಡುಕೊಳ್ಳಬೇಕೆಂದು ಸೂಚಿಸಿತು.

ನೈರುತ್ಯ ಮಾರುತದಲ್ಲಿ ಕೊರತೆ ಆಗಿರುವ 52.8 ಟಿಎಂಸಿ ಅಡಿ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಆದೇಶಿಸಬೇಕೆಂದು ಕೋರಿ ತಮಿಳುನಾಡು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಡಿ.ಕೆ ಜೈನ್ ಹಾಗೂ ನ್ಯಾ. ಮದನ ಬಿ. ಲೋಕೂರ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು, ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಸಭೆ ಸೇರಿ ಸಮಾಲೋಚನೆ ನಡೆಸಬೇಕು.
ರೈತರ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಸರ್ವಸಮ್ಮತ ತೀರ್ಮಾನ ಮಾಡಬೇಕು ಎಂದು ಸಲಹೆ ಮಾಡಿತು.

ಕೇವಲ ಮುಖ್ಯಮಂತ್ರಿಗಳು ಭೇಟಿ ಮಾಡಿ ಚರ್ಚೆ ಮಾಡಿದರೆ ಸಾಲದು. ತಮ್ಮ ತಮ್ಮ ರಾಜ್ಯಗಳ ನೀರಾವರಿ ತಜ್ಞರನ್ನು ಆಹ್ವಾನಿಸಿ ಪರಸ್ಪರ ಕೊಡು- ಕೊಳ್ಳುವ ಮೂಲಕ ನದಿ ನೀರು ಹಂಚಿಕೆ ವಿವಾದಕ್ಕೆ ಪರಿಹಾರ ಹುಡುಕಬೇಕು. ಸೌಹಾರ್ದ ವಾತಾವರಣದಲ್ಲಿ ಸಭೆ ನಡೆಯಬೇಕು. ರೈತರ ಹಿತಾಸಕ್ತಿ ಗಮನದಲ್ಲಿ ಇಟ್ಟುಕೊಂಡು ಮಾತುಕತೆ ನಡೆಸಬೇಕು. ಎಂದು ನ್ಯಾಯಪೀಠ ತಿಳಿಸಿತು.

ಉಭಯ ರಾಜ್ಯಗಳು ಮುಖ್ಯಮಂತ್ರಿಗಳು ಭೇಟಿ ಮಾಡಿ ಸಮಾಲೋಚನೆ ನಡೆಸಲು ಏಕೆ ಸಾಧ್ಯವಿಲ್ಲ. ಪ್ರಯತ್ನ ಮಾಡಿ ನೋಡಲಿ. ಮನಸ್ಸು ಮಾಡಿದರೆ ಯಾವುದೂ ಅಸಾಧ್ಯವಲ್ಲ. ನೆಪ ಮಾತ್ರಕ್ಕೆ ಸಭೆ ನಡೆಸಿ ಕಾಫಿ ಕುಡಿದು ಕೈತೊಳೆದುಕೊಳ್ಳಬಾರದು. ಅರ್ಥಪೂರ್ಣವಾದ ಚರ್ಚೆ ನಡೆಸಬೇಕು. ಕೊಡು- ಕೊಳ್ಳುವ ಮೂಲಕ ಈ ಸೂಕ್ಷ್ಮ ಸಮಸ್ಯೆಗೆ ಪರಿಹಾರ ಹುಡುಕಬೇಕು ಎಂದು ನ್ಯಾಯಪೀಠ ಹೇಳಿತು.

ಉಭಯ ರಾಜ್ಯಗಳ ನಡುವಿನ ನೀರು ಹಂಚಿಕೆ ವಿವಾದ ಬಗೆಹರಿಸಲು ಪ್ರಧಾನಿ ಅಧ್ಯಕ್ಷತೆಯ ಕಾವೇರಿ ನದಿ ಪ್ರಾಧಿಕಾರದ ಸಭೆ ಕರೆಯುವಂತೆ ಪದೇ ಪದೇ ಹೇಳಲು ಸಾಧ್ಯವಿಲ್ಲ. ಅವರಿಗೆ ಇದೊಂದೇ ಕೆಲಸವಲ್ಲ. ಬೇಕಾದಷ್ಟು ಮಹತ್ವದ ಕೆಲಸಗಳಿರುತ್ತವೆ. ಹೀಗಾಗಿ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳೇ ಮಾತುಕತೆ ನಡೆಸಲಿ. ಅರ್ಥಪೂರ್ಣವಾದ ಚರ್ಚೆ ಮೂಲಕ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳಲಿ ಎಂದು ಕೋರ್ಟ್ ತಾಕೀತು ಮಾಡಿತು.

ಸಲಹೆಗೆ ರಾಜ್ಯದ ಸಮ್ಮತಿ: ರಾಜ್ಯದ ಪರ ಹಾಜರಾದ ಹಿರಿಯ ವಕೀಲ ಎಫ್.ಎಸ್. ನಾರಿಮನ್ ನ್ಯಾಯಾಲಯದ ಸಲಹೆ ಒಪ್ಪಿಕೊಂಡರು. ಸಮಸ್ಯೆಗೆ ಪರಿಹಾರ ಕಂಡುಹಿಡಿಯಲು ನೆರೆಯ ತಮಿಳುನಾಡಿನ ಮುಖ್ಯ ಮಂತ್ರಿ ಜತೆ ಸಭೆ ನಡೆಸಲು ಮುಖ್ಯಮಂತ್ರಿಗೆ ಹೇಳುವುದಾಗಿ ಭರವಸೆ ನೀಡಿದರು. ಆದರೆ, ತಮಿಳುನಾಡು ಪರ ವಕೀಲರು ನ್ಯಾಯಾಲಯದ ಸಲಹೆ ಬಗ್ಗೆ ಯಾವುದೇ ಬದ್ಧತೆ ನೀಡಲಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಅಭಿಪ್ರಾಯ ಪಡೆಯುವುದಾಗಿ ವಿವರಿಸಿದರು.

ಚರ್ಚೆಯ ನಡುವೆ ನಾರಿಮನ್, ಜಲ ಸಂಪನ್ಮೂಲ ಸಚಿವಾಲಯದ ಕಾರ್ಯದರ್ಶಿ ಅಧ್ಯಕ್ಷರಾಗಿರುವ `ಕಾವೇರಿ ನೀರಾವರಿ ಪ್ರಾಧಿಕಾರ'ದ (ಸಿಎಂಸಿ) ಸಭೆ ನವೆಂಬರ್ 28ಕ್ಕೆ ನಿಗದಿ ಆಗಿದೆ ಎಂದು ತಿಳಿಸಿದರು. ಬಳಿಕ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿತು. ತಮಿಳುನಾಡು ಹೊಸದಾಗಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ಅರ್ಜಿಯಲ್ಲಿ 15 ಲಕ್ಷ ಎಕರೆಯಲ್ಲಿ ಬೆಳೆದಿರುವ ಬೆಳೆ ರಕ್ಷಣೆಗೆ ಫೆಬ್ರುವರಿವರೆಗೆ 52.8 ಟಿಎಂಸಿ ನೀರು ಬಿಡುವಂತೆ ಕರ್ನಾಟಕಕ್ಕೆ ಸೂಚಿಸುವಂತೆ ಮನವಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.