ಸಿಎಂ ರಾಜೀನಾಮೆಗೆ ಸಿಪಿಐಎಂ ಆಗ್ರಹ

7

ಸಿಎಂ ರಾಜೀನಾಮೆಗೆ ಸಿಪಿಐಎಂ ಆಗ್ರಹ

Published:
Updated:

ಕೋಲಾರ: ಹಲವಾರು ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದ್ದು, ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಸಿಪಿಐಎಂ ಕಾರ್ಯಕರ್ತರು ನಗರದ ಗಾಂಧಿವನದಲ್ಲಿ ಸೋಮವಾರ ಧರಣಿ ನಡೆಸಿದರು.ಮುಖ್ಯಮಂತ್ರಿ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿರುವುದರಿಂದ ಯಡಿಯೂರಪ್ಪನವರು ತಕ್ಷಣ ರಾಜೀನಾಮೆ ನೀಡಿಬೇಕು ಎಂದು ಆಗ್ರಹಿಸಿದರು. ದೂರು ದಾಖಲಿಸಲು ರಾಜ್ಯಪಾಲರು ಅನುಮತಿ ನೀಡಿದ್ದನ್ನು ವಿರೋಧಿಸಿ ಬಿಜೆಪಿ ಬಂದ್ ನಡೆಸಿರುವುದು ಜನರ ಗಮನ ಬೇರೆಡೆ ಸೆಳೆಯುವ ತಂತ್ರ ಎಂದು ದೂರಿದರು.ಮುಖಂಡರಾದ ಪಿ.ಆರ್.ಸೂರ್ಯನಾರಾಯಣ, ಜಿ.ಅರ್ಜುನನ್, ಸಂಪಂಗಿ, ಗಾಂಧಿನಗರ ನಾರಾಯಣಸ್ವಾಮಿ ನೇತೃತ್ವ ವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry