ಸಿಎಂ ವಿರುದ್ಧ ದೂರು: ಇಂದು ಪುನಃ ವಿಚಾರಣೆ

7

ಸಿಎಂ ವಿರುದ್ಧ ದೂರು: ಇಂದು ಪುನಃ ವಿಚಾರಣೆ

Published:
Updated:

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದ ಸರ್ಕಾರದ ಬೊಕ್ಕಸಕ್ಕೆ ಸಾವಿರಾರು ಕೋಟಿ ರೂಪಾಯಿ ನಷ್ಟವಾಗಿರುವುದಾಗಿ ದೂರಿ ವಕೀಲ ಸಿರಾಜಿನ್ ಬಾಷಾ ಅವರು ದಾಖಲು ಮಾಡಿರುವ 3ನೇ ದೂರಿನ ವಿಚಾರಣೆಯನ್ನು ನಗರದ ಲೋಕಾಯುಕ್ತ ವಿಶೇಷ ನ್ಯಾಯಾಲಯ ಬುಧವಾರಕ್ಕೆ ಮುಂದೂಡಿದೆ.ಭೂಹಗರಣದ ತನಿಖೆಯನ್ನು ಯಾರು ಕೈಗೊಳ್ಳಬೇಕು ಎಂಬ ವಿವಾದವು ಹೈಕೋರ್ಟ್‌ನಲ್ಲಿ ಇನ್ನೂ ಇತ್ಯರ್ಥ ಆಗಬೇಕಿದೆ.ದೂರಿನ ವಿಚಾರಣೆಗೆ ತಡೆ ನೀಡಬೇಕು ಎಂದು ಯಡಿಯೂರಪ್ಪನವರ ಅಳಿಯ ಸೋಹನ್‌ಕುಮಾರ್ ಮಂಗಳವಾರ ಅರ್ಜಿ   ಸಲ್ಲಿಸಿದರು.

 ಈ ಅರ್ಜಿಗೆ ಆಕ್ಷೇಪಣೆ ಸಲ್ಲಿಸಬೇಕು ಎಂದು ಬಾಷಾ ಪರ ವಕೀಲ ಸಿ.ಎಚ್.ಹನುಮಂತರಾಯರು ಹೇಳಿದ ಕಾರಣ ವಿಚಾರಣೆಯನ್ನು ನ್ಯಾಯಾಧೀಶ ಸಿ.ಬಿ.ಹಿಪ್ಪರಗಿ ಮುಂದೂಡಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry