ಸಿ.ಎಂ ವಿವೇಚನೆಗೆ ಬಿಟ್ಟದ್ದು

5

ಸಿ.ಎಂ ವಿವೇಚನೆಗೆ ಬಿಟ್ಟದ್ದು

Published:
Updated:

ಬೆಂಗಳೂರು: `ಮೆಗಾಸಿಟಿ~ ನಿವೇಶನ ಹಂಚಿಕೆ ಹಗರಣದ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಸಿ.ಪಿ. ಯೋಗೀಶ್ವರ್ ಅವರನ್ನು ಸಂಪುಟದಲ್ಲಿ ಉಳಿಸಿಕೊಳ್ಳುವುದು ಅಥವಾ ಕೈಬಿಡುವುದು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರ ವಿವೇಚನೆಗೆ ಬಿಟ್ಟ ವಿಚಾರ ಎಂದು ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಹೇಳಿದರು.ಭಾರತೀಯ ವಾಯುಸೇನೆಯ 79ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಶನಿವಾರ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, `ಸಚಿವ ಸಂಪುಟದ ಸದಸ್ಯರ ವಿರುದ್ಧ ಆರೋಪ ಕೇಳಿಬಂದಾಗ ಅದನ್ನು ಸಿ.ಎಂಗೆ ತಿಳಿಸುವುದು ನನ್ನ ಜವಾಬ್ದಾರಿ. ಯೋಗೀಶ್ವರ್ ವಿರುದ್ಧ ಕೇಳಿಬಂದಿರುವ ಆರೋಪ ಕುರಿತೂ ಅವರಿಗೆ ಮಾಹಿತಿ ನೀಡಿದ್ದೇನೆ.`ಯೋಗೀಶ್ವರ್ ಇತ್ತೀಚೆಗೆ ನನ್ನನ್ನು ಭೇಟಿ ಮಾಡಿದ್ದಾಗಲೂ ಅವರ ವಿರುದ್ಧ ಇರುವ ಆರೋಪಗಳ ಕುರಿತು ವಿವರಿಸಿದ್ದೇನೆ. ಯೋಗೀಶ್ವರ್ ಅವರನ್ನು ಸಚಿವರನ್ನಾಗಿ ನೇಮಕ ಮಾಡಿದ್ದು ನಾನಲ್ಲ. ಸಂವಿಧಾನದ ಚೌಕಟ್ಟಿನಲ್ಲಿ ಸಾಧ್ಯವಿರುವುದನ್ನು ನಾನು ಮಾಡಿದ್ದೇನೆ~ ಎಂದು ಸ್ಪಷ್ಟನೆ ನೀಡಿದರು.ಲೋಕಾಯುಕ್ತರ ನೇಮಕ: `ನೂತನ ಲೋಕಾಯುಕ್ತರ ನೇಮಕ ಕುರಿತಂತೆ ಸರ್ಕಾರದಿಂದ ಯಾವುದೇ ಪತ್ರ ಬಂದಿಲ್ಲ. ಈ ಹುದ್ದೆಗೆ ನ್ಯಾಯಮೂರ್ತಿಗಳಾದ ಎಸ್.ಆರ್. ಬನ್ನೂರುಮಠ ಮತ್ತು ಎನ್.ಕೆ. ಸೋಧಿ ಅವರ ಹೆಸರು ಪ್ರಸ್ತಾಪವಾಗಿದೆ ಎಂಬುದನ್ನು ಮಾಧ್ಯಮಗಳಲ್ಲಿ ಓದಿದ್ದೇನೆ. ಅವರ ಹೆಸರು ಲೋಕಾಯುಕ್ತ ಹುದ್ದೆಗೆ ಹೇಗೆ ಕೇಳಿಬಂತು ಎಂಬುದು ಗೊತ್ತಾಗುತ್ತಿಲ್ಲ~ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry