ಬುಧವಾರ, ಮೇ 12, 2021
24 °C

ಸಿಎಂ ವೈಖರಿ: ಎಚ್‌ಡಿಕೆ ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಬೇರೆಯವರ ಆದೇಶದಂತೆ ಕೆಲಸ ಮಾಡುತ್ತಿರುವ ಡಿ.ವಿ.ಸದಾನಂದಗೌಡ ಅವರು ರಾಜ್ಯದ ದಿನಗೂಲಿ ಮುಖ್ಯ ಮಂತ್ರಿ~ ಎಂದು ಜೆಡಿಎಸ್ ರಾಜ್ಯ ಘಟಕ ಅಧ್ಯಕ್ಷ ಎಚ್.ಡಿ. ಕುಮಾರ ಸ್ವಾಮಿ ಲೇವಡಿ ಮಾಡಿದರು.ಜೆಡಿಎಸ್ ನಾಯಕರ ಕುರಿತು ಕೊಪ್ಪಳದಲ್ಲಿ ಇತ್ತೀಚೆಗೆ ಮುಖ್ಯಮಂತ್ರಿ ನೀಡಿದ್ದ ಹೇಳಿಕೆ ಬಗ್ಗೆ ಭಾನುವಾರ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, `ರಾಜ್ಯದಲ್ಲಿ ನಾಲ್ಕು ಸರ್ಕಾರಗಳಿವೆ ಎಂದರು. ಯಡಿಯೂರಪ್ಪ, ಅನಂತಕುಮಾರ್, ಜಗದೀಶ ಶೆಟ್ಟರ್ ತಲಾ ಒಂದೊಂದು ಸರ್ಕಾರ ನಡೆಸುತ್ತಿದ್ದಾರೆ. ಸದಾನಂದ ಗೌಡ ಅವರು ದಿನಗೂಲಿ ಮುಖ್ಯಮಂತ್ರಿ ಆಗಿ ಕೆಲಸ ಮಾಡುತ್ತಿದ್ದಾರೆ~ ಎಂದು ವ್ಯಂಗ್ಯವಾಡಿದರು.ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿದ್ದ ತಮ್ಮ ವಿರುದ್ಧವೇ ಖಾಸಗಿ ಮೊಕ ದ್ದಮೆ ದಾಖಲಿಸಿರುವುದರ ಹಿಂದೆ ರಾಜಕೀಯ ಷಡ್ಯಂತ್ರ ಇದೆ ಎಂದು ತಿಳಿಸಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.