ಸಿಎನ್‌ಆರ್, ಓಎಲ್‌ಎನ್‌ಗೆ ಪ್ರಶಸ್ತಿ

7

ಸಿಎನ್‌ಆರ್, ಓಎಲ್‌ಎನ್‌ಗೆ ಪ್ರಶಸ್ತಿ

Published:
Updated:

ಬೆಂಗಳೂರು: ಕನ್ನಡದ ಹಿರಿಯ ವಿಮರ್ಶಕರಾದ ಸಿ.ಎನ್. ರಾಮಚಂದ್ರನ್  ಮತ್ತು ಓ.ಎಲ್. ನಾಗಭೂಷಣಸ್ವಾಮಿ ಅವರು 2012ರ `ಜಿ.ಎಸ್.ಶಿವರುದ್ರಪ್ಪ ಪ್ರಶಸ್ತಿ'ಗೆ ಆಯ್ಕೆಯಾಗಿದ್ದಾರೆ. ಕನ್ನಡ ಸಾಹಿತ್ಯ ವಿಮರ್ಶೆಗೆ ಈ ಇಬ್ಬರು ಹಿರಿಯರು ಸಲ್ಲಿಸಿದ ಕೊಡುಗೆಯನ್ನು ಪರಿಗಣಿಸಿ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು `ಡಾ. ಜಿ.ಎಸ್. ಎಸ್. ವಿಶ್ವಸ್ತ ಮಂಡಲಿ' ತಿಳಿಸಿದೆ.ಪ್ರಶಸ್ತಿಯು ತಲಾ ಹದಿನೈದು ಸಾವಿರ ರೂಪಾಯಿ ನಗದು ಬಹುಮಾನ ಮತ್ತು ಸ್ಮರಣಿಕೆಗಳನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭ 2013ರ ಫೆಬ್ರುವರಿ 7ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಯು.ಆರ್. ಅನಂತಮೂರ್ತಿ ಅಧ್ಯಕ್ಷತೆ ವಹಿಸಿ, ಪ್ರಶಸ್ತಿ ಪ್ರದಾನ ಮಾಡುವರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry