ಕಲಬುರ್ಗಿ: ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ (ಸಿಐಐಎಲ್)ಯಲ್ಲಿರುವ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ (ಸಿಇಎಸ್ಸಿಕೆ)ದ ನೂತನ ಯೋಜನಾ ನಿರ್ದೇಶಕರಾಗಿ ಗುಲಬರ್ಗಾ ವಿಶ್ವವಿದ್ಯಾಲಯದ ನಿವೃತ್ತ ಕನ್ನಡ ಪ್ರಾಧ್ಯಾಪಕ ಡಾ.ಪಿ.ಕೆ. ಖಂಡೋಬಾ ನೇಮಕಗೊಂಡಿದ್ದಾರೆ.

ಬಂಜಾರ ಸಂಸ್ಕೃತಿ ಹಾಗೂ ಭಾಷೆಯ ಬಗ್ಗೆ ಆಳವಾಗಿ ಅಧ್ಯಯನ ಮಾಡಿರುವ ಡಾ. ಖಂಡೋಬಾ ಸೋಮವಾರ ಅಧಿಕಾರ ಸ್ವೀಕರಿಸಿದರು. ಇವರ ಅವಧಿ ಮೂರು ವರ್ಷ. 2015ರ ಏಪ್ರಿಲ್ನಲ್ಲಿ ಡಾ.ಎಚ್.ಎಂ. ಮಹೇಶ್ವರಯ್ಯ ಅವರನ್ನು ಮೊದಲ ನಿರ್ದೇಶಕರಾಗಿ ನೇಮಕ ಮಾಡಲಾಗಿತ್ತು.

ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಮಹೇಶ್ವರಯ್ಯ ಅವರನ್ನು ಕಲಬುರ್ಗಿ ಜಿಲ್ಲೆ ಆಳಂದ ತಾಲ್ಲೂಕಿನ ಕಡಗಂಚಿ ಗ್ರಾಮದಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (ಸಿಯುಕೆ)ದ ಕುಲಪತಿಯನ್ನಾಗಿ ನೇಮಕ ಮಾಡಲಾಯಿತು. ಇದೀಗ ಡಾ.ಖಂಡೋಬಾ ಎರಡನೇ ನಿರ್ದೇಶಕರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.