ಶನಿವಾರ, ಮೇ 8, 2021
24 °C

ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: `ವಿವಿಧ ವೃತ್ತಿಯಲ್ಲಿನ ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾ ಯಿಸಿ ಸಿಐಟಿಯು ಜಿಲ್ಲಾ ಘಟಕದ ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.ಕೂಲಿ ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಮಾಡುವಂತೆ ಆಗ್ರಹಿಸಿ ಸಂಘಟನೆ 2008 ರಿಂದಲೂ ಹೋರಾಟ ಮಾಡು ತ್ತಿದ್ದರೂ, ಸರ್ಕಾರ ಸ್ಪಂದಿಸು ತ್ತಿಲ್ಲ. ಕಾರ್ಮಿಕರಿಗೆ ಕನಿಷ್ಠ 10ಸಾವಿರ ರೂಪಾಯಿ ವೇತನ ನಿಗದಿ ಮಾಡ ಬೇಕು.ಅಂಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ರಚನೆಯಾಗಿ ಹಲವು ವರ್ಷ ಕಳೆದರೂ ಕಾರ್ಮಿಕರಿಗೆ ಗುರುತಿನ ಚೀಟಿ ನೀಡಿಲ್ಲ.  ವಿದೇಶಿ ಬಂಡವಾಳ ಹೂಡಿಕೆ ಸಮಾವೇಶ ಮಾಡುವ ಮೂಲಕ ಸಾರ್ವಜನಿಕ ಹಾಗೂ ಕಾರ್ಮಿಕರ ಹಣವನ್ನು ಸರ್ಕಾರ ಪೂಲುಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ದುಡಿಯುವವರನ್ನು ಕಾಯಂ ಗೊಳಿಸುವುದು, ಕನಿಷ್ಠವೇತನ ಹಾಗೂ ಇತರ ಸೌಲಭ್ಯಗಳನ್ನು ನೀಡುವುದು, ಸರ್ಕಾರಿ ಕಂಪನಿಗಳ ಷೇರು ಮಾರಾಟ ತಡೆಯುವುದೂ ಸೇರಿದಂತೆ ಒಟ್ಟು 19 ಬೆಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆಯಲ್ಲಿ ಸಾಗಿದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಜಿಲ್ಲಾಧಿಕಾರಿ ಕಚೇರಿಗೆಬಂದು ಮನವಿ ಸಲ್ಲಿಸಿದರು. ಸಿಐಟಿಯು ಪ್ರಧಾನ ಕಾರ್ಯದರ್ಶಿ ಧರ್ಮೇಶ್, ಕೆ.ಟಿ. ಹೋನ್ನೆ ಗೌಡ, ಮಂಜಮ್ಮ. ರೇವತಿ, ಚಂದ್ರಯ್ಯ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.