ಭಾನುವಾರ, ಮೇ 9, 2021
27 °C

ಸಿಐಡಿ ವರದಿ ರದ್ದತಿಗೆ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ (ಗ್ರೂಪ್ ಎ ಮತ್ತು ಬಿ) ನೇಮಕಾತಿಗೆ ಕರ್ನಾಟಕ ಲೋಕ ಸೇವಾ ಆಯೋಗವು 1998, 1999 ಹಾಗೂ 2004ರಲ್ಲಿ ನಡೆಸಿರುವ ಪರೀಕ್ಷೆಯಲ್ಲಿ ನಡೆದ ಅವ್ಯವಹಾರದಲ್ಲಿ ಭಾಗಿಯಾಗಿರುವ ಆರೋಪ ಹೊತ್ತ ಕೆಎಎಸ್ ಅಧಿಕಾರಿಗಳಾದ ಅರ್ಚನಾ, ಆಶಾ, ಸಲ್ಮಾ  ಅವರು ಸಿಐಡಿ ವರದಿ ರದ್ದತಿಗೆ ಕೋರಿ ಹೈಕೋರ್ಟ್‌ಗೆ ಬುಧವಾರ ಅರ್ಜಿ ಸಲ್ಲಿಸಿದ್ದಾರೆ.ಇದೇ 19ರಂದು ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿರುವ ಇವರು ಈಗ ಸಿಐಡಿ ವರದಿ ಪ್ರಶ್ನಿಸಿದ್ದಾರೆ.  ವರದಿಯಲ್ಲಿ ಇರುವ ತಮ್ಮ ಹೆಸರನ್ನು ಕೈಬಿಡಲು ಸಿಐಡಿಗೆ ಆದೇಶಿಸಬೇಕು ಎನ್ನುವುದು ಅವರ ಮನವಿ. ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಆಯ್ಕೆಯಾದ ಆರೋಪದ ಹಿನ್ನೆಲೆಯಲ್ಲಿ ಹೈಕೋರ್ಟ್ ಸಿಐಡಿ ತನಿಖೆಗೆ ಆದೇಶಿಸಿತ್ತು.

 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.