ಶನಿವಾರ, ಏಪ್ರಿಲ್ 17, 2021
32 °C

ಸಿ.ಕಾಳರಸಯ್ಯ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಧುಮೇಹ, ರಕ್ತದೊತ್ತಡದಿಂದ ಬಳಲುತ್ತಿದ್ದ ಲೆಕ್ಕ ಪರಿಶೋಧಕ ಸಿ.ಕಾಳರಸಯ್ಯ (59) ಅವರು ಶುಕ್ರವಾರ ನಿಧನರಾದರು.ನಗರದ ಮಾಗಡಿರಸ್ತೆಯಲ್ಲಿರುವ ಪ್ರಶಾಂತನಗರದಲ್ಲಿ ಕುಟುಂಬ ಸದಸ್ಯರೊಂದಿಗೆ ವಾಸವಾಗಿದ್ದ ಅವರು, ರಾಜಾಜಿನಗರದಲ್ಲಿನ ತಮ್ಮ ಕಂಪೆನಿಯಲ್ಲೇ ಲೆಕ್ಕ ಪರಿಶೋಧಕರಾಗಿದ್ದರು. ಅನಾರೋಗ್ಯಕ್ಕೆ ಗುರಿಯಾಗಿದ್ದ ಕಾಳರಸಯ್ಯ, ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಅವರು ಕೊನೆಯುಸಿರೆಳೆದರು. ಮೃತರು ಪತ್ನಿ ತಾರಾ ಮತ್ತು ಇಬ್ಬರು ಗಂಡು ಮಕ್ಕಳಿದ್ದಾರೆ.ಸುಮ್ಮನಹಳ್ಳಿ ವಿದ್ಯುತ್ ಚಿತಾಗಾರದಲ್ಲಿ ಶನಿವಾರ ಮಧ್ಯಾಹ್ನ ಒಂದು ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ. ಮೃತರ ಕುಟುಂಬ ಸದಸ್ಯರನ್ನು ಸಂಪರ್ಕಿಸುವವರು 9341234493 ಮೊಬೈಲ್ ಸಂಖ್ಯೆಗೆ ಕರೆ ಮಾಡಬಹುದು. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.