ಸಿಕ್ಕಿಂ: ಭೂಕಂಪ ಪೀಡಿತರಿಗೆ ಆಹಾರ ಪೊಟ್ಟಣ ಪೂರೈಕೆ

ಬುಧವಾರ, ಮೇ 22, 2019
29 °C

ಸಿಕ್ಕಿಂ: ಭೂಕಂಪ ಪೀಡಿತರಿಗೆ ಆಹಾರ ಪೊಟ್ಟಣ ಪೂರೈಕೆ

Published:
Updated:

ಟುಂಗ್ (ಸಿಕ್ಕಿಂ), (ಪಿಟಿಐ): ಇನ್ನಷ್ಟು ಹೊಸ ಭೂಕಂಪನ ಮತ್ತು ಭೂಕುಸಿತದ ಹೆದರಿಕೆಯ ಹಿನ್ನೆಲೆಯಲ್ಲಿ ಇಲ್ಲಿನ ಭೂಕಂಪ ಪೀಡಿತ ಪ್ರದೇಶದಿಂದ ಜನ ದೂರದ ಜಾಗಗಳಿಗೆ ಸ್ಥಳಾಂತರಗೊಂಡಿದ್ದಾರೆ. ಇದೇ ವೇಳೆ ಭೂಕಂಪದಲ್ಲಿ ಸತ್ತವರ ಸಂಖ್ಯೆ 118ಕ್ಕೆ ಏರಿದೆ.ಪ್ರಬಲ ಭೂಕಂಪದಿಂದ ನಿರ್ಗತಿಕರಾದವರಿಗೆ ಹತ್ತು ಸಾವಿರಕ್ಕೂ ಹೆಚ್ಚಿನ ಆಹಾರ ಪೊಟ್ಟಣಗಳನ್ನು ವಿತರಿಸಲಾಗಿದೆ, ಇನ್ನೂ ಐದು ಸಾವಿರ ಪೊಟ್ಟಣಗಳನ್ನು ಕಳುಹಿಸಲಾಗುತ್ತದೆ ಎಂದು ಗೃಹ ಸಚಿವಾಲಯ ತಿಳಿಸಿದೆ.ನಿರಾಶ್ರಿತರಿಗೆ ಆಹಾರ ಮತ್ತು ಇತರ ಅಗತ್ಯ ವಸ್ತುಗಳು ದೊರೆಯುವಂತೆ ಮಾಡುವ ಸಲುವಾಗಿ ರಾಜ್ಯದುದ್ದಕ್ಕೂ 100ಕ್ಕೂ ಹೆಚ್ಚು ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಕರ್ಮಾ ಗ್ಯಾತ್ಸೊ ತಿಳಿಸಿದ್ದಾರೆ.

 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry