ಮಂಗಳವಾರ, ಏಪ್ರಿಲ್ 20, 2021
32 °C

ಸಿಗ್ನಲ್ ಮುಕ್ತ ಕಾರಿಡಾರ್ ನಿರ್ಮಾಣ: ಹೆಬ್ಬಾಳ ಮೇಲ್ಸೇತುವೆಗೆ ಮತ್ತೊಂದು ಪಥ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿಗ್ನಲ್ ಮುಕ್ತ ಕಾರಿಡಾರ್ ನಿರ್ಮಾಣ: ಹೆಬ್ಬಾಳ ಮೇಲ್ಸೇತುವೆಗೆ ಮತ್ತೊಂದು ಪಥ

ಬೆಂಗಳೂರು: ನಗರದ ಮೇಖ್ರಿ ವೃತ್ತದಿಂದ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವರೆಗೆ ಸಿಗ್ನಲ್ ಮುಕ್ತ ಕಾರಿಡಾರ್ ನಿರ್ಮಾಣದ ಭಾಗವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಹೆಬ್ಬಾಳ ಮೇಲ್ಸೇತುವೆಯಲ್ಲಿ ಮತ್ತೊಂದು ಪಥ (ಲೇನ್) ನಿರ್ಮಿಸಿ ವಿಸ್ತರಿಸಲು ನಿರ್ಧರಿಸಿದೆ. ಈ ವಿಸ್ತರಣೆ ಕಾಮಗಾರಿ ಶೀಘ್ರದಲ್ಲಿ ಆರಂಭಗೊಳ್ಳಲಿದ್ದು, ಮುಂದಿನ ವರ್ಷದ ಜೂನ್ ಅಂತ್ಯದೊಳಗೆ ಪೂರ್ಣಗೊಳ್ಳುವ ನಿರೀಕ್ಷೆಇದೆ.

`ಬೆಂಗಳೂರಿನಿಂದ ವಿಮಾನ ನಿಲ್ದಾಣದ ವರೆಗಿನ ಆರು ಪಥದ ರಸ್ತೆ ನಿರ್ಮಾಣದ ಮೊದಲ ಹಂತವೇ ಈ ವಿಸ್ತರಣೆ ಕಾಮಗಾರಿ~ ಎಂದು ಪ್ರಾಧಿಕಾರದ ಹಿರಿಯ ಅಧಿಕಾರಿಯೊಬ್ಬರು `ಪ್ರಜಾವಾಣಿ~ಗೆ ತಿಳಿಸಿದರು.

`ಮೇಲ್ಸೇತುವೆಯನ್ನು ಇನ್ನೂ 12 ಅಡಿ ವಿಸ್ತರಿಸಲು ಅವಕಾಶ ಇದೆ. ವಿಸ್ತರಣೆಯಿಂದ ಸಂಚಾರ ದಟ್ಟಣೆ ಕಡಿಮೆ ಆಗಲಿದೆ. ನಿರ್ಮಾಣ-ಮಾಲೀಕತ್ವ-ನಿರ್ವಹಣೆ ಹಾಗೂ ವರ್ಗಾವಣೆ (ಬಿಒಒಟಿ) ಆಧಾರದಲ್ಲಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಆದರೆ, ಜನರಿಗೆ ಇದರಿಂದ ಹೊರೆ ಬೀಳುವುದಿಲ್ಲ. ವಿಮಾನ ನಿಲ್ದಾಣದ ಸಮೀಪ ಟೋಲ್ ಗೇಟ್ ನಿರ್ಮಿಸಲಾಗುವುದು. ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರಿಂದ ಶುಲ್ಕ ಸಂಗ್ರಹಿಸಲು ಉದ್ದೇಶಿಸಲಾಗಿದೆ~ ಎಂದು ಅವರು ವಿವರಿಸಿದರು.

ಈ ವಿಸ್ತರಣೆ ಕಾಮಗಾರಿಯ ವೆಚ್ಚದ ಬಗ್ಗೆ ವಿವರ ನೀಡದ ಅವರು, `ಮೇಖ್ರಿ ವೃತ್ತದಿಂದ ವಿಮಾನ ನಿಲ್ದಾಣದ ವರೆಗಿನ ಕಾಮಗಾರಿಯ ವೆಚ್ಚ 700 ಕೋಟಿ ರೂಪಾಯಿಗಳು ಆಗಬಹುದು ಎಂದು ಅಂದಾಜಿಸಲಾಗಿದೆ~ ಎಂದರು.

ಈ ಕಾಮಗಾರಿಯ ಸಂಬಂಧ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸಮಾಲೋಚನೆ ನಡೆಸಿದ್ದಾರೆ. `ಯಾವುದೇ ರಸ್ತೆ ವಿಸ್ತರಣೆ ಮಾಡುವುದರಿಂದ ಹೆಚ್ಚುವರಿ ಸಾಮರ್ಥ್ಯ ದೊರಕಲಿದೆ. ಈ ರಸ್ತೆಯಲ್ಲಿ ಈಗ ವಾಹನಗಳ ಪ್ರಮಾಣ ಗಣನೀಯವಾಗಿ ಹೆಚ್ಚಾಗಿ ಒತ್ತಡ ಉಂಟಾಗಿದೆ. ಮೇಲ್ಸೇತುವೆ ವಿಸ್ತರಣೆ ಕಾಮಗಾರಿಯಿಂದ ಸಂಚಾರ ದಟ್ಟಣೆ ಪ್ರಮಾಣ ಕಡಿಮೆ ಆಗಲಿದೆ~ ಎಂದು ಸಂಚಾರ ವಿಭಾಗದ ಹೆಚ್ಚುವರಿ ಕಮಿಷನರ್ ಎಂ.ಎ. ಸಲೀಮ್ ಅಭಿಪ್ರಾಯಪಟ್ಟರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.