ಶನಿವಾರ, ಮೇ 15, 2021
24 °C

ಸಿಗ್ನಲ್ ಮುಕ್ತ ಕಾರಿಡಾರ್: ಶೀಘ್ರ ಭೂಸ್ವಾಧೀನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯು ತನ್ನ ಮಹಾತ್ವಾಕಾಂಕ್ಷಿ ಐದು ಸಿಗ್ನಲ್ ಮುಕ್ತ ಕಾರಿಡಾರ್‌ಗಳ ನಿರ್ಮಾಣಕ್ಕಾಗಿ 485 ಎಕರೆ ಭೂಮಿಯನ್ನು ಸ್ವಾಧೀನಕ್ಕೆ ಪಡೆಯಲಿದೆ.ಭೂಸ್ವಾಧೀನಕ್ಕಾಗಿ ಬಿಬಿಎಂಪಿ ಕಳೆದ ಕೆಲವು ತಿಂಗಳ ಹಿಂದೆಯೇ ಕಂದಾಯ ಇಲಾಖೆಗೆ ಪ್ರಸ್ತಾವವನ್ನು ಕಳುಹಿಸಿಕೊಟ್ಟಿದೆ. ಇನ್ನೊಂದು ವಾರದಲ್ಲಿ ಪ್ರಸ್ತಾವಕ್ಕೆ ಒಪ್ಪಿಗೆ ದೊರೆಯುವ ಸಾಧ್ಯತೆ ಇದೆ.ಈ ಸಂಬಂಧ ಬಿಬಿಎಂಪಿ ಆಯುಕ್ತ ಎಂ. ಲಕ್ಷ್ಮೀನಾರಾಯಣ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಯೋಜನೆ ಮಾಹಿತಿ ನೀಡಿದರು. ರಾಜ್ಯ ಬಜೆಟ್‌ನಲ್ಲಿ ಕಾರಿಡಾರ್ ಯೋಜನೆಗೆ ಹಣಕಾಸಿನ ನೆರವು ಘೋಷಣೆಯಾಗುವ ಸಾಧ್ಯತೆ ಇದೆ.`ಪ್ರಜಾವಾಣಿ'ಯೊಂದಿಗೆ ಮಾತನಾಡಿದ ಲಕ್ಷ್ಮೀನಾರಾಯಣ, `ಯೋಜನೆಗಳ ಆರಂಭಕ್ಕೆ ಅನುಮತಿ ನೀಡುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದೇವೆ. ಹಲವು ತಿಂಗಳಿಂದ ನೆನೆಗುದಿಗೆ ಬಿದ್ದಿರುವ ಈ ಯೋಜನೆಗಳಿಗೆ ಶೀಘ್ರ ಮಂಜೂರಾತಿ ದೊರೆಯುವ ನಿರೀಕ್ಷೆ ಇದೆ' ಎಂದು ತಿಳಿಸಿದರು.ಹೊಸೂರು ರಸ್ತೆಯ ಸೆಂಟ್ರಲ್ ಸಿಲ್ಕ್ ಬೋರ್ಡ್‌ನಿಂದ ವೆಲ್ಲಾರ ಜಂಕ್ಷನ್‌ವರೆಗೆ, ಮೈಸೂರು ರಸ್ತೆಯಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್‌ವರೆಗೆ, ಯಶವಂತಪುರದ ಡಾ. ರಾಜಕುಮಾರ್ ಸರ್ಕಲ್‌ನಿಂದ ಓಕಳಿಪುರಂ ರಸ್ತೆವರೆಗೆ, ವೆಲ್ಲಾರ ಜಂಕ್ಷನ್‌ನಿಂದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಕುಂಡಲಹಳ್ಳಿವರೆಗೆ ಮತ್ತು ಮೇಖ್ರಿ ಸರ್ಕಲ್‌ನಿಂದ ಹೋಪ್ ಫಾರ್ಮ್‌ವರೆಗೆ ಈ ಕಾರಿಡಾರ್‌ಗಳು ನಿರ್ಮಾಣವಾಗಲಿವೆ.ಯೋಜನೆ ಅನುಷ್ಠಾನಕ್ಕೆರೂ  618 ಕೋಟಿ ಅಗತ್ಯವಿದೆ. ಗುತ್ತಿಗೆದಾರರನ್ನೂ ಆಗಲೇ ಆಯ್ಕೆ ಮಾಡಲಾಗಿದೆ. ಸರ್ಕಾರದ ಮಂಜೂರಾತಿ ಸಿಕ್ಕ ಕೂಡಲೇ ಕಾಮಗಾರಿ ಆರಂಭವಾಗಲಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೂಲಗಳು ತಿಳಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.