ಗುರುವಾರ , ಮೇ 13, 2021
16 °C

ಸಿ.ಟಿ.ರವಿ ಪ್ರಕರಣ: ಆಕ್ಷೇಪ ಸಲ್ಲಿಕೆಗೆ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಗೃಹ ಮಂಡಳಿಯಿಂದ ಅಕ್ರಮವಾಗಿ ನಿವೇಶನ ಪಡೆದಿರುವ ಪ್ರಕರಣದಲ್ಲಿ ಶಾಸಕ ಸಿ.ಟಿ.ರವಿ ಅವರನ್ನು ಆರೋಪ ಮುಕ್ತಗೊಳಿಸಿ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ವರದಿಗೆ ಆಕ್ಷೇಪಣೆ ಸಲ್ಲಿಸುವುದಾಗಿ ದೂರುದಾರ ಆರ್.ದೇವಿಪ್ರಸಾದ್ ಶನಿವಾರ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.`ಲೋಕಾಯುಕ್ತ ಪೊಲೀಸರ ತೀರ್ಮಾನ ಸರಿಯಾಗಿಲ್ಲ. ಪತ್ನಿಯನ್ನು ಆರೋಪಿ ಎಂದು ಗುರುತಿಸಿ, ಪತಿಯನ್ನು ದೋಷಮುಕ್ತಗೊಳಿಸಲಾಗಿದೆ. ಈ ಕ್ರಮವನ್ನು ಪ್ರಶ್ನಿಸಿ ಶೀಘ್ರದಲ್ಲೇ ಆಕ್ಷೇಪಣೆ ಸಲ್ಲಿಸಲಾಗುವುದು~ ಎಂದು ವಿಚಾರಣೆ ವೇಳೆ ದೇವಿಪ್ರಸಾದ್ ಪ್ರಮಾಣ ಪತ್ರ ಸಲ್ಲಿಸಿದರು.ಪ್ರಕರಣದ ತನಿಖಾಧಿಕಾರಿಯಾಗಿರುವ ಡಿವೈಎಸ್‌ಪಿ ಅಬ್ದುಲ್ ಅಹದ್ ಅವರನ್ನು ಈ ಕುರಿತು ಪ್ರಶ್ನಿಸಿದ ನ್ಯಾಯಾಧೀಶರು, `ಲೋಕಾಯುಕ್ತದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ಗಮನಕ್ಕೆ ತಂದ ಬಳಿಕವೇ ಮೊದಲನೇ ಆರೋಪಿಯನ್ನು ಆರೋಪ ಮುಕ್ತಗೊಳಿಸುವ ತೀರ್ಮಾನ ಕೈಗೊಳ್ಳಲಾಗಿದೆಯೇ~ ಎಂದು ಕೇಳಿದರು.

 

`ಲೋಕಾಯುಕ್ತದ ಎಸ್‌ಪಿಯವರ ಮೇಲ್ವಿಚಾರಣೆ ಯಲ್ಲಿ ತನಿಖೆ ನಡೆದಿದೆ. ಅವರ ಪತ್ರದ ಆಧಾರದಲ್ಲೇ ಈ ನಿರ್ಧಾರ ಕೈಗೊಳ್ಳಲಾಗಿದೆ~ ಎಂದು ತಿಳಿಸಿದರು. ಬಳಿಕ ವಿಚಾರಣೆಯನ್ನು ಇದೇ 13ಕ್ಕೆ ಮುಂದೂಡಿ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಅವರು ಆದೇಶ ಹೊರಡಿಸಿದರು.ವಿವರಣೆ ನೀಡಲು ಸೂಚನೆ: ತನಿಖೆಯ ಸಂದರ್ಭದಲ್ಲಿನ ಅಗತ್ಯ ಆಧರಿಸಿ ಆರೋಪಿಗಳನ್ನು ಬಂಧಿಸಲು ಪೊಲೀಸರೇ ನಿರ್ಧಾರ ಕೈಗೊಂಡ ಪ್ರಕರಣಗಳ ವಿವರ ಒದಗಿಸುವಂತೆ ವಿಶೇಷ ನ್ಯಾಯಾಲಯ ಲೋಕಾಯುಕ್ತದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅವರಿಗೆ ಸೂಚಿಸಿದೆ.ಭೂಕಬಳಿಕೆ ಆರೋಪ ಎದುರಿಸುತ್ತಿರುವ ಸಿರಗುಪ್ಪ ಶಾಸಕ ಎಂ.ಎಸ್.ಸೋಮಲಿಂಗಪ್ಪ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಸೂಚನೆ ನೀಡಿತು. ತನಿಖೆಯ ಅವಧಿಯಲ್ಲಿನ ಅಗತ್ಯಕ್ಕೆ ತಕ್ಕಂತೆ ಬಂಧನದ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂಬ ಲೋಕಾಯುಕ್ತ ಪೊಲೀಸರ ವಾದದ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ನಿರ್ದೇಶನ ನೀಡಿದೆ. ಅರ್ಜಿಯ ವಿಚಾರಣೆಯಲ್ಲಿ ಏಪ್ರಿಲ್ 19ಕ್ಕೆ ಮುಂದೂಡಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.