ನವದೆಹಲಿ (ಪಿಟಿಐ): ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ಸಂಬಂಧಿಸಿದ ಕಾಮಗಾರಿ ನಿರ್ವಹಿಸಿದ್ದ ಸರ್ಕಾರಿ ಇಲಾಖೆಗಳು ಮತ್ತು ಖಾಸಗಿ ಕಂಪೆನಿಗಳು ಸುಮಾರು 1 ಸಾವಿರ ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿರುವುದನ್ನು ಕೇಂದ್ರೀಯ ಜಾಗೃತ ಆಯೋಗ (ಸಿವಿಸಿ) ಪತ್ತೆ ಹಚ್ಚಿದೆ.

ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ನಡೆದ ಹಗರಣದ ಬಗ್ಗೆ ತನಿಖೆ ನಡೆಸಲು ಸಿವಿಸಿ ನೇಮಿಸಿರುವ ತೆರಿಗೆ ಮತ್ತು ಇತರ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಸಮಿತಿಯ ನೆರವಿನಿಂದ ಭಾರಿ ಮೊತ್ತದ ತೆರಿಗೆ ಉಳಿಸಿಕೊಂಡಿರುವುದನ್ನು ಪತ್ತೆ ಮಾಡಲಾಗಿದೆ ಎಂದು ಆಯೋಗದ ಆಯುಕ್ತ ಆರ್. ಶ್ರೀಕುಮಾರ್ ತಿಳಿಸಿದ್ದಾರೆ.
`ಕ್ರೀಡಾಕೂಟದ ವಿವಿಧ ಕಾಮಗಾರಿಗೆ 37 ಇಲಾಖೆಗಳು 15,000 ಕೋಟಿ ರೂಪಾಯಿ ವೆಚ್ಚ ಮಾಡಿವೆ. ಇದರಲ್ಲಿ 9,000 ಕೋಟಿ ರೂಪಾಯಿ ಸಾರ್ವಜನಿಕ ಕ್ಷೇತ್ರಕ್ಕೆ ಸಂಬಂಧಿಸಿದ್ದಾಗಿದೆ. ಈ ಬಗ್ಗೆ ಸಿವಿಸಿ ನೇರ ತನಿಖೆ ಕೈಗೊಂಡಿದೆ~ ಎಂದು ಅವರು ಹೇಳಿದ್ದಾರೆ.

`ಬಾಕಿ ಉಳಿಸಿಕೊಂಡಿರುವ ತೆರಿಗೆಯನ್ನು ಸಂಗ್ರಹಿಸಲಾಗುವುದು. 1 ಸಾವಿರ ಕೋಟಿ ರೂಪಾಯಿ ತೆರಿಗೆಗೆ ಸಂಬಂಧಿಸಿದ ವಿಷಯ ಕೂಡ ಅಧಿಕಾರಿಗಳು ಬಗೆಹರಿಸುವ ವಿಶ್ವಾಸ ಇದೆ~ ಎಂದಿದ್ದಾರೆ.

`ಕ್ರೀಡಾಕೂಟದಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದ ವರದಿ ಹೊರಬರಲಿದೆ. ವರದಿಯ ಆಧಾರದ ಮೇಲೆ ನಾವು ಕಾರ್ಯನಿರ್ವಹಿಸಲಿದ್ದೇವೆ. ಸರ್ಕಾರಿ ಮತ್ತು ಖಾಸಗಿ ನಿರ್ಮಾಣ ಸಂಸ್ಥೆಗಳು ಭಾಗಿಯಾಗಿರುವ ಒಟ್ಟು 53 ಪ್ರಕರಣಗಳ ಬಗ್ಗೆ ಸಿವಿಸಿ ತನಿಖೆ ನಡೆಸುತ್ತಿದೆ~ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.