ಭಾನುವಾರ, ಮೇ 9, 2021
18 °C

ಸಿದ್ದರಾಮಯ್ಯ ಕೊಂಡಾಡಿದ ಕಾರಜೋಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟ ರಚನೆಯಲ್ಲಿ ಸ್ವಜನಪಕ್ಷಪಾತಕ್ಕೆ ಅವಕಾಶ ಕೊಡದೆ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡುವ ಮೂಲಕ ಬೇರೆಯವರಿಗೆ ಮಾದರಿಯಾಗಿದ್ದಾರೆ ಎಂದು ಬಿಜೆಪಿಯ ಗೋವಿಂದ ಕಾರಜೋಳ  ಮಂಗಳವಾರ ವಿಧಾನಸಭೆಯಲ್ಲಿ ಕೊಂಡಾಡಿದರು.ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, `ಕುರುಬ ಸಮುದಾಯಕ್ಕೆ ಸೇರಿದ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುವುದರಿಂದ ಆ ಸಮುದಾಯದ ಶಾಸಕರಿಗೆ ಸಂಪುಟದಲ್ಲಿ ಹೆಚ್ಚಿನ ಅವಕಾಶ ಸಿಗಲಿದೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ, ಅವರ ಸಮುದಾಯದ ಒಬ್ಬರಿಗೂ ಅವಕಾಶ ನೀಡದೆ ತಾವು ಸ್ವಜನಪಕ್ಷಪಾತಿ ಅಲ್ಲ ಎಂಬುದನ್ನು ನಿರೂಪಿಸಿದ್ದಾರೆ' ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.`ಅತ್ಯಂತ ಸಣ್ಣ ಸಮುದಾಯಗಳಾದ ಬೋವಿ, ಅಂಬಿಗ ಜನಾಂಗದವರಿಗೂ ಸಂಪುಟದಲ್ಲಿ ಅವಕಾಶ ಕಲ್ಪಿಸಿದ್ದಾರೆ. ದಿ.ಕೆ.ಎಚ್.ರಂಗನಾಥ್ ನಂತರ ದಲಿತರು ಲೋಕೋಪಯೋಗಿ ಸಚಿವರಾಗಿರಲಿಲ್ಲ. ಆ ಕೊರತೆಯನ್ನು ಈ ಬಾರಿ ನೀಗಿಸಿದ್ದಾರೆ. ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವುದು ಅಷ್ಟೇ ಅಲ್ಲದೆ ಕೃತಿಯಲ್ಲೂ ತೋರಿಸಿಕೊಟ್ಟಿದ್ದಾರೆ. ಇಂತಹ ಕೆಲಸವನ್ನು ಪ್ರತಿಯೊಂದು ರಾಜಕೀಯ ಪಕ್ಷ, ಮುಖಂಡರು ಮಾಡಬೇಕು' ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.