ಶುಕ್ರವಾರ, ಏಪ್ರಿಲ್ 16, 2021
25 °C

ಸಿದ್ದರಾಮಯ್ಯ ಪರ ಬಿಎಸ್‌ವೈ ವಕಾಲತ್ತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಆಗುವ ಸಂದರ್ಭ ಸೃಷ್ಟಿಯಾದಲ್ಲಿ ಕಾಂಗ್ರೆಸ್ ಪಕ್ಷದ ಯಾವುದೇ ಮುಖಂಡರೂ ಅದನ್ನು ವಿರೋಧಿಸಬಾರದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದರು.

ತಮ್ಮ ನಿವಾಸದಲ್ಲಿ ಮಂಗಳವಾರ ಆಟೊ ಚಾಲಕರ ಸಂಘಟನೆಯ ಮುಖಂಡರನ್ನು ಭೇಟಿ ಮಾಡಿದ ಬಳಿಕ ಪತ್ರಕರ್ತರ ಜೊತೆ ಮಾತನಾಡಿದ ಅವರು, `ಸಿದ್ದರಾಮಯ್ಯ ಅವರು ರಾಜ್ಯದ ಉತ್ತಮ ರಾಜಕಾರಣಿಗಳಲ್ಲಿ ಒಬ್ಬರು. ಅವರು ಮುಖ್ಯಮಂತ್ರಿ ಹುದ್ದೆ ಬಯಸುವುದರಲ್ಲಿ ಯಾವುದೇ ತಪ್ಪು ಇಲ್ಲ. ಅಂತಹ ಸಂದರ್ಭ ಒದಗಿಬಂದರೆ ಕಾಂಗ್ರೆಸ್ ಮುಖಂಡರು ಅದನ್ನು ವಿರೋಧಿಸಬಾರದು' ಎಂದರು.

ಡಿಸೆಂಬರ್ 9ರಂದು ಹಾವೇರಿಯಲ್ಲಿ ನಡೆಯುವ ಕರ್ನಾಟಕ ಜನತಾ ಪಕ್ಷದ ಸಮಾವೇಶದಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಜನರು ಸೇರುತ್ತಾರೆ. ರಾಜ್ಯದ ರಾಜಕೀಯದಲ್ಲಿ ಇದು ಒಂದು ಐತಿಹಾಸಿಕ ಸಮಾವೇಶ ಆಗಲಿದೆ. ಈ ಸಮಾವೇಶದ ನಂತರ ರಾಜ್ಯ ರಾಜಕಾರಣದಲ್ಲಿ ಹಲವು ಮಹತ್ವದ ಬದಲಾವಣೆಗಳು ಘಟಿಸಲಿವೆ. ವಿವಿಧ ಪಕ್ಷಗಳ ಹಲವು ಮುಖಂಡರು ಕೆಜೆಪಿ ಸೇರಲು ಸಿದ್ಧರಿದ್ದಾರೆ. ಎಲ್ಲವನ್ನೂ ಮುಂದಿನ ದಿನಗಳಲ್ಲಿ ಬಹಿರಂಗಪಡಿಸಲಾಗುವುದು ಎಂದು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.