ಶುಕ್ರವಾರ, ನವೆಂಬರ್ 22, 2019
27 °C

ಸಿದ್ದರಾಮಯ್ಯ ಪರ ಮುಖಂಡರ ಪಾದಯಾತ್ರೆ

Published:
Updated:

ತಿ.ನರಸೀಪುರ: ವರುಣಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಪರ ಅವರ ಬೆಂಬಲಿಗರು, ಮುಖಂಡರು ಹಾಗೂ ಕಾರ್ಯಕರ್ತರು ತಾಲ್ಲೂಕಿನ ಗರ್ಗೇಶ್ವರಿ ಗ್ರಾಮದಲ್ಲಿ ಭಾನುವಾರ ಪಾದಯಾತ್ರೆ ನಡೆಸಿದರು.ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾಲ್ಲೂಕಿನ ಗರ್ಗೇಶ್ವರಿ ಗ್ರಾಮದಲ್ಲಿ ಮತಯಾಚನೆ ಮಾಡಿ ಮಾತನಾಡಿದ ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಿ.ಬಸವೇಗೌಡ, ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷ ಸಂಘಟನೆಯ ಹೊಣೆ ಹೊತ್ತಿದ್ದಾರೆ. ಅವರ ನೇತೃತ್ವದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಮುಖ್ಯಮಂತ್ರಿಯಾಗುವ ಅವಕಾಶವಿದೆ. ಕ್ಷೇತ್ರದ ಜನತೆ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ವಿಧಾನಸಭೆಗೆ ಚುನಾಯಿಸಬೇಕು ಎಂದು ಮನವಿ ಮಾಡಿದರು.ಏ.29ರಂದು ವರುಣಾ ಕ್ಷೇತ್ರದ ಅಭ್ಯರ್ಥಿ ಸಿದ್ದರಾಮಯ್ಯ ಅವರು ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಮೇ2 ರಂದು ಮೈಸೂರಿಗೆ ಸೋನಿಯಾ ಗಾಂಧಿ ಆಗಮಿಸಿ ಪ್ರಚಾರ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಸಿ. ಬಲರಾಂ, ವರುಣಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಮುದ್ದೇಗೌಡ (ರಮೇಶ್), ಪಿ.ಸ್ವಾಮಿನಾಥ್‌ಗೌಡ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ  ಜಮಾಲ್, ಮಾಜಿ ಉಪಾಧ್ಯಕ್ಷ ಸಿ.ವೆಂಕಟೇಶ, ಕಾಂಗ್ರೆಸ್‌ನ ಕಾರ್ಮಿಕ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಎನ್.ಗೋಪಾಲರಾಜು, ಕೆಂಪಯ್ಯನಹುಂಡಿ ಮಹದೇವಣ್ಣ, ಯುವ ಕಾಂಗ್ರೆಸ್ ಅಧ್ಯಕ್ಷ ಅಮ್ಜದ್‌ಖಾನ್, ಎಂ.ಕೆ. ಸಹದೇವ, ಯುವ ಕಾಂಗ್ರೆಸ್ ಉಪಾಧ್ಯಕ್ಷ ಹೆಳವರಹುಂಡಿ ಸೋಮು, ಗರ್ಗೇಶ್ವರಿ ನಂಜುಂಡೇಗೌಡ, ರಾಮಲಿಂಗು, ಕಾಳೇಗೌಡ, ಆದಿಲ್ ಷಮೀಮ್, ಮೆಡಿಕಲ್ ಆದಿಲ್, ವೆಂಕಟೇಶ್, ನವಿದ್, ಏಜಾಜ್, ಷಕೀಲ್, ಫಯಾಜ್, ಯಡದೊರೆ ಸುಬ್ಬನಾಯ್ಕ ಇದ್ದರು.

ಪ್ರತಿಕ್ರಿಯಿಸಿ (+)