ಸಿದ್ದರಾಮಯ್ಯ ಬೆಂಬಲಿಗರ ಜತೆ ಮಾತಿನ ಚಕಮಕಿ

7

ಸಿದ್ದರಾಮಯ್ಯ ಬೆಂಬಲಿಗರ ಜತೆ ಮಾತಿನ ಚಕಮಕಿ

Published:
Updated:

ಶ್ರೀರಂಗಪಟ್ಟಣ: ಪಟ್ಟಣದಲ್ಲಿ ನಡೆಯುತ್ತಿರುವ ಕಾವೇರಿ ಚಳವಳಿಯಲ್ಲಿ ಭಾಗವಹಿಸಲು ಬುಧವಾರ ಆಗಮಿಸಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ರಾಜೀನಾಮೆ ನೀಡುವಂತೆ ಸ್ಥಳೀಯ ಪ್ರತಿಭಟನಾಕಾರರು ಆಗ್ರಹಿಸಿದಾಗ ಸಿದ್ದರಾಮಯ್ಯ ಬೆಂಗಲಿಗರು ಹಾಗೂ ಸ್ಥಳೀಯ ಪ್ರತಿಭಟನಾಕಾರ ನಡುವೆ ಮಾತಿನ ಚಕಮಕಿ ನಡೆಯಿತು.ಸಿದ್ದರಾಮಯ್ಯ ವೇದಿಕೆಗೆ ಆಗಮಿಸುತ್ತಿದ್ದಂತೆ ಪ್ರಧಾನಮಂತ್ರಿ ಹಾಗೂ ಸಿದ್ದರಾಮಯ್ಯ ಅವರ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿದರು. ~ನಿಮ್ಮವರೇ ಆದ ಪ್ರಧಾನ ಮಂತ್ರಿಯವರು ತಮಿಳುನಾಡಿಗೆ ನೀರು ಬಿಡುವಂತೆ ಆದೇಶ ಮಾಡಿದ್ದಾರೆ. ರೈತರ ಬಗ್ಗೆ ನಿಮಗೆ ನಿಜವಾದ ಕಾಳಜಿ ಇದ್ದರೆ ತಕ್ಷಣ ವಿರೋಧ ಪಕ್ಷದ ನಾಯಕ ಸ್ಥಾನ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ನಂತರ ಚಳವಳಿಯಲ್ಲಿ ಪಾಲ್ಗೊಳ್ಳಿ~ ಎಂದು ಪ್ರತಿಭಟನಾಕಾರರು ತಾಕೀತು ಮಾಡಿದರು.ಇದು ಸಿದ್ದರಾಮಯ್ಯ ಬೆಂಬಲಿಗರನ್ನು ಕೆರಳಿಸಿತು. ಪ್ರತಿಭಟನಾಕಾರರು ಹಾಗೂ ಸಿದ್ದರಾಮಯ್ಯ ಬೆಂಬಲಿಗರ ನಡುವೆ ವಾಗ್ವಾದ ನಡೆಯಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry