ಗುರುವಾರ , ಮೇ 6, 2021
27 °C

ಸಿದ್ದು ಟೀಕೆಗೆ ಎಚ್‌ಡಿಕೆ ಸವಾಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜೆಡಿಎಸ್ ಮುಖಂಡರ ಸಲಹೆಯಂತೆ ರಾಜ್ಯದ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದೆ ಎಂಬುದನ್ನು ಕಾಂಗ್ರೆಸ್ ನಾಯಕ ಸಿದ್ಧರಾಮಯ್ಯ ಅವರು ಸಾಬೀತು ಮಾಡಿದರೆ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸವಾಲು ಎಸೆದರು.



ಇಲ್ಲಿನ ಜೆಡಿಎಸ್ ಕಚೇರಿಯಲ್ಲಿ ಶನಿವಾರ ಆಯೋಜಿಸಲಾಗಿದ್ದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರ ಸೂಚನೆಯಂತೆ ಆಡಳಿತ ನಡೆಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದರು. ಈಗ ಸಿದ್ಧರಾಮಯ್ಯ ಅವರೂ ಇದೇ ಮಾತು ಆಡಿದ್ದಾರೆ. ಇದು ಸುಳ್ಳು. ವಿನಾಕಾರಣ ಹೀಗೆ ಹೇಳುತ್ತಿದ್ದಾರೆ~ ಎಂದರು.



`ಸಿದ್ಧರಾಮಯ್ಯ ಅವರು ಯಡಿಯೂರಪ್ಪ ಅವರಿಂದ 20 ಕೋಟಿ ರೂಪಾಯಿ ಹಣ ಪಡೆದಿದ್ದಾರೆ ಎಂಬುದಾಗಿ ತಾವು ಹೇಳಿಲ್ಲ. ಕಾಂಗ್ರೆಸ್‌ನ ಕೆಲವರು ಯಡಿಯೂರಪ್ಪ ಅವರ ಜೊತೆ ಕೈಜೋಡಿಸಿದ್ದಾರೆ ಎಂದು ಆರೋಪಿಸಿದ್ದೆ. ಈ ವಿಚಾರದಲ್ಲಿ ಅನಗತ್ಯ ವಿವಾದ ಸೃಷ್ಟಿಸುವುದು ಬೇಡ~ ಎಂದು ಹೇಳಿದರು.

ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ, ಮಾಜಿ ಶಾಸಕ ಡಾ.ಕೆ.ಅನ್ನದಾನಿ ಸೇರಿದಂತೆ ಇತರ ಪ್ರಮುಖರು ಕಾರ್ಯಕ್ರಮದಲ್ಲಿ ಹಾಜರಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.