ಸಿದ್ಧರಾಮೇಶ್ವರ ಉತ್ಸವ

7

ಸಿದ್ಧರಾಮೇಶ್ವರ ಉತ್ಸವ

Published:
Updated:

ಮಹದೇವಪುರ: ಕೋನದಾಸಪುರ ಗ್ರಾಮದಲ್ಲಿ ಭಾನುವಾರ ಸಿದ್ಧರಾಮೇ ಶ್ವರಸ್ವಾಮಿಯ 839ನೇ ಜಯಂತ್ಯು ತ್ಸವ ವಿಜೃಂಭಣೆಯಿಂದ ನಡೆಯಿತು.ಉತ್ಸವಕ್ಕೆ ಚಾಲನೆ ನೀಡಿದ ಸಚಿವ ವಿ.ಸೋಮಣ್ಣ, `12ನೇ ಶತಮಾನ ದಲ್ಲಿದ್ದ ಶರಣರು ಸಮಾಜದಲ್ಲಿ ಜಾತಿ ವ್ಯವಸ್ಥೆಯನ್ನು ಕಿತ್ತೊಗೆಯಲು ಶ್ರಮಿಸಿದರು. ಅರ್ಥಪೂರ್ಣ ವಚನಗಳ ಮೂಲಕ ಜನರಲ್ಲಿ ಅರಿವು ಮೂಡಿಸಿದರು~ ಎಂದರು.ಸಮಾಜ ಸುಧಾರಣೆಯಲ್ಲಿ ಭೋವಿ ಜನಾಂಗದ ಶರಣರು ಪ್ರಮುಖ ಪಾತ್ರ ವಹಿಸಿದ್ದರು. ಅಂತಹ ಶರಣರ ಆದರ್ಶ ಮತ್ತು ತತ್ವಗಳನ್ನು ಎಲ್ಲರೂ ಪಾಲಿಸಬೇಕು ಎಂದು ಅವರು ಹೇಳಿದರು.ಸಚಿವ ಬಿ.ಎನ್.ಬಚ್ಚೇಗೌಡ ಮಾತನಾಡಿ, ಪ್ರತಿಯೊಂದು ಜನಾಂಗದವರು ಆರ್ಥಿಕವಾಗಿ ಪ್ರಬಲರಾಗಬೇಕಾದರೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವತ್ತ ಗಮನ ನೀಡಬೇಕು ಎಂದರು.ಬಾಗಲಕೋಟೆಯ ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.ಶಾಸಕರಾದ ಅರವಿಂದ ಲಿಂಬಾವಳಿ, ನಾಗರಾಜ್, ಮಹದೇವಪುರ ಬಿಜೆಪಿ ಘಟಕದ ಅಧ್ಯಕ್ಷ ಜಯಚಂದ್ರ ರೆಡ್ಡಿ, ಬಿಬಿಎಂಪಿ ಸದಸ್ಯ ಎನ್.ಆರ್.ಶ್ರೀಧರ್ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry