ಗುರುವಾರ , ಜೂನ್ 24, 2021
23 °C

ಸಿದ್ಧಾಂತಕ್ಕೆ ಬದ್ಧರಾಗಿದ್ದ ಆಚಾರ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಸರಳ ಸಜ್ಜನರಾಗಿದ್ದ ಡಾ. ವಿ.ಎಸ್. ಆಚಾರ್ಯ ಅವರ ರಾಜಕೀಯ ಮೌಲ್ಯಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು~ ಎಂದು ವಿಧಾನ ಪರಿಷತ್ ಸದಸ್ಯ ಎಂ.ವಿ. ರಾಜಶೇಖರನ್ ಹೇಳಿದರು.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ನಗರದ ಭಾರತೀಯ ವಿದ್ಯಾಭವನದ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು.`ಮೃದು ಸ್ವಭಾವದವರಾಗಿದ್ದ ಆಚಾರ್ಯ, ತತ್ವ ಸಿದ್ಧಾಂತದ ವಿಷಯ ಬಂದಾಗ ಅಷ್ಟೇ ಕಠಿಣ ಆಗುತ್ತಿದ್ದರು. ತಾವು ನಂಬಿದ ರಾಜಕೀಯ, ಸಾಮಾಜಿಕ ತತ್ವಕ್ಕೆ ವಿರುದ್ಧವಾಗಿ ಅವರು ಎಂದೂ ನಡೆದುಕೊಳ್ಳಲಿಲ್ಲ.ರಾಮಕೃಷ್ಣ ಹೆಗಡೆ ಅವರ ಸರ್ಕಾರದಲ್ಲಿ ಸಚಿವರಾಗುವ ಅವಕಾಶ ಇದ್ದರೂ ದೂರಗಾಮಿ ಪರಿಣಾಮ ಯೋಚಿಸಿ ಅವರು ಸಚಿವರಾಗಲಿಲ್ಲ. ಯಾರೊಂದಿಗೂ ಅವರೂ ದ್ವೇಷವನ್ನು ಕಟ್ಟಿಕೊಳ್ಳಲಿಲ್ಲ~ ಎಂದು ಬಬ್ಬೂರುಕಮ್ಮೆ ಸೇವಾ ಸಮಿತಿ ಅಧ್ಯಕ್ಷ ಡಾ. ಎ.ವಿ. ಪ್ರಸನ್ನ ಹೇಳಿದರು.`ಅರ್ಜಿ ಹಿಡಿದು ಯಾರೇ ಬಂದರೂ ಸಹಾಯ ಮಾಡುತ್ತಿದ್ದರು. ಸಹಾಯ ಮಾಡಲು ಸಾಧ್ಯವಾಗದಿದ್ದರೆ ಅದಕ್ಕೆ ಕಾರಣ ಏನೆಂದು ತಿಳಿಹೇಳಿ ಕಳುಹಿಸುತ್ತಿದ್ದರು. ಗೃಹ ಸಚಿವರಾಗಿದ್ದಾಗ ಅವರು ಕಾನ್‌ಸ್ಟೇಬಲ್ ಒಬ್ಬರನ್ನು ಮುಂದಿನ ಕುರ್ಚಿಯಲ್ಲಿ ಕೂರಿಸಿಕೊಂಡು ಮಾತನಾಡಿಸಿದ್ದನ್ನು ಕಂಡಿದ್ದೇನೆ. ಸರ್ಕಾರದ ಕೆಲಸವನ್ನು ದೇವರ ಕೆಲಸ ಎಂದುಕೊಂಡು ನಿರ್ವಹಿಸುತ್ತಿದ್ದರು. ಕುಟುಂಬದ ಸದಸ್ಯರು ತಮ್ಮ ಕೆಲಸದಲ್ಲಿ ಹಸ್ತಕ್ಷೇಪ ಮಾಡಲು ಅವರು ಬಿಡುತ್ತಿರಲಿಲ್ಲ~ ಎಂದು ಅವರು ಹೇಳಿದರು.ಶಾಸಕರಾದ ದಿನೇಶ್ ಗುಂಡೂರಾವ್, ಡಾ. ಸಿ.ಎನ್. ಅಶ್ವತ್ಥನಾರಾಯಣ, ಹೇಮಚಂದ್ರಸಾಗರ್, ಧರ್ಮಸ್ಥಳದ ಸುರೇಂದ್ರ ಕುಮಾರ್, ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಯು.ವಿ. ಶ್ರೀನಿವಾಸಮೂರ್ತಿ, ಹಿರಿಯ ಪತ್ರಕರ್ತ ವಿ.ಎನ್. ಸುಬ್ಬರಾವ್, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸಿದ್ದಯ್ಯ, ಬಿಡಿಎ ಆಯುಕ್ತ ಭರತ್‌ಲಾಲ್ ಮೀನಾ ಮತ್ತಿತರರು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.