ಬುಧವಾರ, ಜೂನ್ 16, 2021
28 °C

ಸಿಪಿಎಂ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ರಾಜ್ಯದ ನೀರಿನ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಮಾರ್ಕ್ಸ್‌ವಾದಿ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ನಗರದ ಮಲ್ಲೇಶ್ವರದ ಜಲಮಂಡಲಿಯ ಕಚೇರಿ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು.`ಪ್ರತಿ ಬೇಸಿಗೆಯಲ್ಲಿಯೂ ರಾಜ್ಯ ವಿಪರೀತವಾದ ನೀರಿನ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಪ್ರತಿವರ್ಷವೂ ನೀರಿನ ಬವಣೆ ಇದ್ದರೂ ಸರ್ಕಾರ ಈ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಮುಂದಾಗುತ್ತಿಲ್ಲ. ಕೇವಲ ವಿಶ್ವ ಜಲ ದಿನದ ಆಚರಣೆಗೆ ಮಾತ್ರ ಸರ್ಕಾರ ತನ್ನ ಕಾಳಜಿಯನ್ನು ಸೀಮಿತಗೊಳಿಸಿಕೊಂಡಿದೆ. ಸುಮಾರು ಎರಡು ಸಾವಿರ ಕೋಟಿ ರೂ.ಗಳ ವೆಚ್ಚದ ಅಂದಾಜಿನ ಹೇಮಾವತಿ ನೀರನ್ನು ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ಸಂಪರ್ಕಿಸುವ ಯೋಜನೆಯನ್ನು ಸರ್ಕಾರ ಕೈಗೆತ್ತಿಕೊಳ್ಳಬೇಕು. ಇದರಿಂದ ಬೆಂಗಳೂರಿನ ನೀರಿನ ಸಮಸ್ಯೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಲಿದೆ~ ಎಂದು ಪಕ್ಷದ ರಾಜಾಜಿನಗರ ವಲಯದ ಕಾರ್ಯದರ್ಶಿ ಕೆ.ವೀರಮಣಿ ಒತ್ತಾಯಿಸಿದರು.`ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಹರಿಯುವ ನದಿಗಳು ವ್ಯರ್ಥವಾಗಿ ಸಮುದ್ರ ಸೇರುತ್ತಿವೆ. ಇದರಿಂದ ಪ್ರತಿವರ್ಷ ಸುಮಾರು ಎರಡು ಸಾವಿರ ಟಿಎಂಸಿ ನೀರು ಸಮುದ್ರದ ಪಾಲಾಗುತ್ತಿದೆ. ಈ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸರ್ಕಾರ ಯೋಜನೆಗಳನ್ನು ರೂಪಿಸಬೇಕು. ರಾಜ್ಯದ ನೀರಿನ ಸಮಸ್ಯೆಯನ್ನು ಪರಿಹರಿಸಲು ಸೋತಿರುವ ಸರ್ಕಾರ ನೀರಿನ ಖಾಸಗೀಕರಣಕ್ಕೆ ಮುಂದಾಗಿರುವ ಕ್ರಮ ಸರಿಯಲ್ಲ. ಕೂಡಲೇ ಸರ್ಕಾರ ನೀರಿನ ಖಾಸಗೀಕರಣದ ಪ್ರಸ್ತಾವನೆಯನ್ನು ಕೈ ಬಿಡಬೇಕು~ ಎಂದು ಅವರು ಆಗ್ರಹಿಸಿದರು.

 

ಸಿಪಿಐ(ಎಂ) ನ ವಲಯ ಕಾರ್ಯದರ್ಶಿಗಳಾದ ಟಿ.ಲೀಲಾವತಿ, ಗೋಪಾಲ ಕೃಷ್ಣ ಹಾಗೂ ಯಶವಂತಪುರ, ರಾಜಾಜಿನಗರ, ಶ್ರೀರಾಮಪುರ ಮತ್ತು ಯಲಹಂಕ ಸಾರ್ವಜನಿಕರು ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.