ಮಂಗಳವಾರ, ಮೇ 11, 2021
26 °C

ಸಿಬಿಐಗೆ ಹೈಕೋರ್ಟ್ ಛೀಮಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಹಮದಾಬಾದ್ (ಪಿಟಿಐ): ಇಶ್ರತ್ ಜಹಾನ್ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲು ವಿಳಂಬ ಮಾಡುತ್ತಿರುವ ಸಿಬಿಐಗೆ ಗುಜರಾತ್ ಹೈಕೋರ್ಟ್ ಶುಕ್ರವಾರ ಛೀಮಾರಿ ಹಾಕಿದೆ.ಎನ್‌ಕೌಂಟರ್ ಬಗ್ಗೆ ತನಿಖೆ ನಡೆಸದೇ, ಗುಪ್ತಚರ ಇಲಾಖೆ ನೀಡಿದ ಮಾಹಿತಿ ಮತ್ತು ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದವರು ಭಯೋತ್ಪಾದಕರಾಗಿದ್ದರೇ ಅಥವಾ ಇಲ್ಲವೇ ಎಂಬುದನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಸಿಬಿಐ ತೊಡಗಿರುವುದು ಮೇಲ್ನೊಟಕ್ಕೆ ಕಂಡು ಬರುತ್ತದೆ ಎಂದು ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾದ ಜಯಂತ್ ಪಟೇಲ್ ಮತ್ತು ಅಭಿಲಾಷಾ ಕುಮಾರಿ ಅಸಮಾಧಾನ ವ್ಯಕ್ತಪಡಿಸಿದರು.`ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದವರು ಉಗ್ರರಾಗಿದ್ದರೆ ಅಥವಾ ಇಲ್ಲವೇ ಎನ್ನುವುದನ್ನು ಪತ್ತೆ ಹಚ್ಚಲು ಕಳೆದ ಒಂದು ತಿಂಗಳಿಂದ ಪ್ರಯತ್ನಿಸುತ್ತಿದ್ದೀರಿ. ಆದರೆ, ನ್ಯಾಯಾಲಯಕ್ಕೆ ಅದು ಬೇಕಾಗಿಲ್ಲ. ಎನ್‌ಕೌಂಟರ್ ನಕಲಿ ಆಗಿತ್ತೇ ಅಥವಾ ಇಲ್ಲವೇ ಎಂದು ಪತ್ತೆ ಹಚ್ಚುವ ಜವಾಬ್ದಾರಿ ನಿಮಗೆ ವಹಿಸಲಾಗಿದೆ. ಅದರಂತೆ ನೀವು ಕಾರ್ಯನಿರ್ವಹಿಸಬೇಕು' ಎಂದು ನ್ಯಾಯಮೂರ್ತಿಗಳು ಸೂಚಿಸಿದರು.ಆರೋಪಿಗಳನ್ನು ಬಂಧಿಸಿದ 90 ದಿನಗಳ ಒಳಗಾಗಿ ದೋಷಾರೋಪ ಪಟ್ಟಿ ಸಲ್ಲಿಸಲು ಏಕೆ ಸಾಧ್ಯವಾಗಿಲ್ಲ ಎಂಬ ಕೋರ್ಟ್ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಸಿಬಿಐ, `ಇದೊಂದು ದೊಡ್ಡ ಸಂಚಿನ ಪ್ರಕರಣವಾಗಿದ್ದು, ಕೂಲಂಕಷ ತನಿಖೆ ನಡೆಸಬೇಕಾಗಿರುವುದರಿಂದ ದೋಷಾರೋಪ ಪಟ್ಟಿ ಸಲ್ಲಿಸಲು ವಿಳಂಬವಾಗಿದೆ' ಎಂದು ತಿಳಿಸಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.