ನವದೆಹಲಿ (ಐಎಎನ್ಎಸ್): ಕಳೆದ ಸಾಲಿನ ಅಕ್ಟೋಬರ್ ತಿಂಗಳಲ್ಲಿ ನಡೆದ ಕಾಮನ್ವೆಲ್ತ್ ಕ್ರೀಡಾಕೂಟದ ತಯಾರಿ ಸಂದರ್ಭದಲ್ಲಿ ನಡೆದ ಹಣಕಾಸಿನ ಅವ್ಯವಹಾರದ ಪ್ರಕರಣಗಳ ತನಿಖೆ ಕುರಿತಂತೆ ಸಿಬಿಐ ಅಧಿಕಾರಿಗಳು ಅಂದು ಕಾಮನ್ವೆಲ್ತ್ ಕ್ರೀಡಾಕೂಟದ ಸಂಘಟನಾ ಸಮಿತಿಯ ಮುಖ್ಯಸ್ಥರಾಗಿದ್ದ ಸುರೇಶ್ ಕಲ್ಮಾಡಿ ಅವರನ್ನು ಮಂಗಳವಾರ ಇಲ್ಲಿ ಮೊತ್ತೊಮ್ಮೆ ವಿಚಾರಣೆಗೆ ಒಳಪಡಿಸಿದೆ.

ಇಲ್ಲಿನ ಸಿಬಿಐನ ಪ್ರಧಾನ ಕಚೇರಿಯಲ್ಲಿ ಅಧಿಕಾರಿಗಳು ಸುರೇಶ ಕಲ್ಮಾಡಿ ಅವರನ್ನು ವಿಚಾರಣೆ ಗೊಳಪಡಿಸುತ್ತಿರುವುದು ಇದು ಎರಡನೇ ಬಾರಿ ಎಂದು ಸಿಬಿಐ ಕಚೇರಿಯ ಮೂಲಗಳು ತಿಳಿಸಿವೆ. ಇದಕ್ಕೂ ಮೊದಲು ಇದೇ ಸಾಲಿನ ಜನವರಿ 5 ರಂದು ಅವರನ್ನು ಸಿಬಿಐ ವಿಚಾರಣೆಗೆ ಒಳಪಡಿಸಿತ್ತು.

2010ರಲ್ಲಿ ನವದೆಹಲಿಯಲ್ಲಿ ನಡೆದ ಕಾಮನ್ ವೆಲ್ತ್ ಕ್ರೀಡಾಕೂಟ ಸಂಘಟನೆಯ ಪೂರ್ವ ಸಿದ್ಧತೆಯ ಕಾಮಗಾರಿಗಳಲ್ಲಿ ಸುರೇಶ್ ಕಲ್ಮಾಡಿ ಅವರು ಹಣಕಾಸು ಅಕ್ರಮ ನಡೆಸಿದ್ದಾರೆ ಎಂಬ ಆರೋಪವನ್ನು ಎದುರಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.