ಗುರುವಾರ , ಮೇ 6, 2021
33 °C

ಸಿಬಿಐ ಕೋರ್ಟ್‌ಗೆ ಜನಾರ್ದನ ರೆಡ್ಡಿ ಹಾಜರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್: ಅಕ್ರಮ ಗಣಿಗಾರಿಕೆ ಸಂಬಂಧಿಸಿದಂತೆ ಸೊಮವಾರ ಬೆಳಿಗ್ಗೆ  ಸಿಬಿಐನಿಂದ ಬಂಧನಕ್ಕೆ ಒಳಗಾಗಿರುವ  ಕರ್ನಾಟಕದ ಮಾಜಿ ಸಚಿವ ಹಾಗೂ ಗಣಿ ಉದ್ಯಮಿ ಜಿ.ಜನಾರ್ದನ ರೆಡ್ಡಿ ಹಾಗೂ ಓಬಳಾಪುರಂ ಗಣಿ ಕಂಪನಿ (ಓಎಂಸಿ) ಯ ವ್ಯವಸ್ಥಾಪಕ ನಿರ್ದೇಶಕ ಬಿ.ವಿ ಶ್ರೀನಿವಾಸ ರೆಡ್ಡಿ ಅವರನ್ನು ಸಿಬಿಐ ಅಧಿಕಾರಿಗಳು ಸಂಜೆ ನಾಲ್ಕು ಗಂಟೆ ಸುಮಾರಿಗೆ ನಾಂಪಲ್ಲಿಯಲ್ಲಿರುವ ಸಿಬಿಐ ಕೋರ್ಟ್ ಗೆ ಹಾಜರುಪಡಿಸಿದರು.ಹೈದರಾಬಾದಿನಿಂದ ಕರ್ನಾಟಕಕ್ಕೆ ಆಗಮಿಸಿದ ಡಿಐಜಿ ಪಿ.ವಿ.ಲಕ್ಷ್ಮಿನಾರಾಯಣ ನೇತೃತ್ವದ ಹದಿನೈದು ಅಧಿಕಾರಿಗಳ ಸಿಬಿಐ ತಂಡವು ಸೋಮವಾರ ಬೆಳಿಗ್ಗೆ  ಬಳ್ಳಾರಿಯಲ್ಲಿರುವ ಜನಾರ್ದನ ರೆಡ್ಡಿ ಹಾಗೂ ಶ್ರೀನಿವಾಸ ರೆಡ್ಡಿ ಅವರಿಗೆ ಸೇರಿದ ನಿವಾಸಗಳ  ಮೇಲೆ  ದೀಢಿರ್ ದಾಳಿ ನಡೆಸಿ,  ಹಲವಾರು ಮಹತ್ವದ ದಾಖಲೆಗಳೊಂದಿಗೆ 30 ಕೆ.ಜಿ ಚಿನ್ನ, 4.5 ಕೋಟಿಗೂ ಅಧಿಕ ನಗದು ವಶಪಡಿಸಿಕೊಂಡು ನಂತರ ಇಬ್ಬರನ್ನೂ ಬಂಧಿಸಿತ್ತು.ನಂತರ ಹೆಚ್ಚಿನ ವಿಚಾರಣೆಗಾಗಿ ಹಾಗೂ ಸಿಬಿಐ ಕೋರ್ಟ್ ಎದುರು ಹಾಜರುಪಡಿಸಲು ಸಿಬಿಐ ಅಧಿಕಾರಿಗಳು  ಅವರನ್ನು  ಹೈದರಾಬಾದ್ ಗೆ ಕರೆತಂದಿದ್ದರು. ಕೋರ್ಟ್ ಗೆ ಹಾಜರುಪಡಿಸುವ ಪೂರ್ವದಲ್ಲಿ ಇಬ್ಬರ ಆರೋಗ್ಯವನ್ನು ತಪಾಸಣೆ ನಡೆಸಲಾಯಿತು.ಐಪಿಸಿ ಸೆಕ್ಷನ್ 120ಬಿ, 379, 411, 420, 422 ಮತ್ತು 447ರ ಅಡಿಯಲ್ಲಿ ಹಾಗೂ ಗಣಿಗಾರಿಕೆ ಮತ್ತು ಅರಣ್ಯ, ಖನೀಜ ಕಾಯ್ದೆಗಳ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಇವರ ವಿರುದ್ಧ ಹಲವು ಪ್ರಕರಣಗಳನ್ನು ದಾಖಲಿಸಲಾಗಿದೆ. ದಾಳಿಯ ವೇಳೆಯಲ್ಲಿ ಸಿಬಿಐ ತಂಡವು 1530 ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ. ಇದರೊಂದಿಗೆ 112 ಕಬ್ಬಿಣ ಅದಿರು ಮಾದರಿಗಳನ್ನು ಸಹ ಸಂಗ್ರಹಿಸಿದೆ ಎನ್ನಲಾಗಿದೆ.ಕರ್ನಾಟಕ ಆಂಧ್ರಪ್ರದೇಶ ಗಡಿಭಾಗದ ಅರಣ್ಯ ಪ್ರದೇಶದಲ್ಲಿ ಅಕ್ರಮ ಗಣಿ ಚಟುವಟಿಕೆ ನಡೆಸಿದ ರೆಡ್ಡಿ ಸಹೋದರರ ಒಡೆತನದ  ಓಎಂಸಿ  ವಿರುದ್ಧ ಸಿಬಿಐ 2009ರಲ್ಲಿ ದೂರು ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಂಧನ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.