ಸಿಬಿಐ ತನಿಖೆಗೆ ವಹಿಸಲು ಶಿಫಾರಸು

7
ಮಂಡ್ಯ, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರ ಅವ್ಯವಹಾರ

ಸಿಬಿಐ ತನಿಖೆಗೆ ವಹಿಸಲು ಶಿಫಾರಸು

Published:
Updated:

ಮಂಗಳೂರು: ‘ಮಂಡ್ಯ ಮತ್ತು ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರ­ಗಳಲ್ಲಿ ನಡೆದ ಹಣ ದುರುಪಯೋಗ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ನಗರಾಭಿ­ವೃದ್ಧಿ ಇಲಾಖೆ ಶಿಫಾರಸು ಮಾಡಿದೆ. ಈ ಕುರಿತ ಕಡತವನ್ನು ಗೃಹ ಸಚಿವರಿಗೆ ಕಳುಹಿಸಿಕೊಡ­ಲಾಗಿದೆ’ ಎಂದು ನಗರಾಭಿವೃದ್ಧಿ ಸಚಿವ ವಿನಯ ಕುಮಾರ್‌ ಸೊರಕೆ ತಿಳಿಸಿದರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ­ನಿರತ ಪತ್ರಕರ್ತರ ಸಂಘದ ಆಶ್ರಯ­ದಲ್ಲಿ ಮಂಗಳವಾರ ಪ್ರೆಸ್‌ಕ್ಲಬ್‌­ನಲ್ಲಿ ನಡೆದ ಪತ್ರಿಕಾ ಸಂವಾದದಲ್ಲಿ ಅವರು ಮಾತನಾಡಿದರು.‘ಈ ಎರಡೂ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ನಡೆದ ಅವ್ಯವಹಾರವು ರೂ. 2 ಕೋಟಿಗೂ ಹೆಚ್ಚಿನದು. ಹಾಗಾಗಿ ಈ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಇಲಾಖೆ ಶಿಫಾರಸು ಮಾಡಿದೆ. ಪ್ರಕರಣದ ಆರೋಪಿಗಳನ್ನು ಅಮಾನತು ಮಾಡಿದ್ದು, ಅವರು ಜೈಲಿನಲ್ಲಿದ್ದಾರೆ’ ಎಂದು ಸಚಿವರು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry