ನವದೆಹಲಿ: ಅಕ್ರಮ ಗಣಿಗಾರಿಕೆ ಹಗರಣದಲ್ಲಿ `ದೇಣಿಗೆ~ ಪಡೆದ ಆರೋಪಕ್ಕೆ ಒಳಗಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಸಿಬಿಐ ತನಿಖೆ ನಡೆಸುವ ಅಗತ್ಯವಿಲ್ಲ ಎಂದು ರಾಜ್ಯ ಸರ್ಕಾರ `ಕೇಂದ್ರ ಉನ್ನತಾಧಿಕಾರ ಸಮಿತಿ~ (ಸಿಇಸಿ)ಗೆ ಮನವಿ ಮಾಡಿದೆ.

ಯಡಿಯೂರಪ್ಪ ವಿರುದ್ಧ ಅಕ್ರಮ ಗಣಿಗಾರಿಕೆ ಸಂಬಂಧ ಸಲ್ಲಿಸಿದ್ದ `ಪ್ರಥಮ ಮಾಹಿತಿ ವರದಿ~ (ಎಫ್ಐಆರ್) ಅನ್ನು ರಾಜ್ಯ ಹೈಕೋರ್ಟ್ ಬುಧವಾರ ರದ್ದುಪಡಿಸಿದ್ದು, ಇದಕ್ಕೆ ಕೆಲ ದಿನಗಳ ಮೊದಲು ರಾಜ್ಯ ಸರ್ಕಾರ ಸಿಇಸಿ ಮುಂದೆ ಸಲ್ಲಿಸಿರುವ ಹೆಚ್ಚುವರಿ ಪ್ರಮಾಣ ಪತ್ರದಲ್ಲಿ, ಮಾಜಿ ಮುಖ್ಯಮಂತ್ರಿ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಸಿಬಿಐ ತನಿಖೆ ನಡೆಸುವ ಅಗತ್ಯವಿಲ್ಲ ಎಂದು ಪ್ರತಿಪಾದಿಸಿದೆ.

ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಡುತ್ತಿರುವ ಧಾರವಾಡದ `ಸಮಾಜ ಪರಿವರ್ತನಾ ಸಮುದಾಯ~ (ಎಸ್ಪಿಎಸ್) ಸುಪ್ರೀಂ ಕೋರ್ಟ್ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿ ಮಾಜಿ ಮುಖ್ಯಮಂತ್ರಿ ಮತ್ತು ಅವರ ಕುಟುಂಬ ಸದಸ್ಯರು `ಜಿಂದಾಲ್ ಸ್ಟೀಲ್ ವರ್ಕ್ಸ್~ (ಜೆಎಸ್ಡಬ್ಲ್ಯು) ಮತ್ತು `ಸೌತ್ವೆಸ್ಟ್ ಮೈನಿಂಗ್ ಕಂಪೆನಿ~ (ಎಸ್ಡಬ್ಲ್ಯುಎಂಸಿ) ಜತೆ ನಡೆಸಿದ್ದಾರೆನ್ನಲಾದ ಅಕ್ರಮ ವ್ಯವಹಾರ ಕುರಿತು ಸಿಬಿಐ ತನಿಖೆ ನಡೆಸುವಂತೆ ಕೇಳಿದೆ.

ಎಸ್ಪಿಎಸ್ ಆರೋಪದಲ್ಲಿ ಯಾವುದೇ ಹುರುಳಿಲ್ಲ. 2007ರಲ್ಲಿ `ಜೆಎಸ್ಡಡಬ್ಲ್ಯು~, `ಎಸ್ಡಬ್ಲ್ಯುಎಂಸಿ~ ಮತ್ತು `ವಿಎಂಪಿಎಲ್~ಗೆ ಗಣಿ ಗುತ್ತಿಗೆಗೆ ರಾಜ್ಯ ಸರ್ಕಾರ ಶಿಫಾರಸು ಮಾಡಿದಾಗ ಯಡಿಯೂರಪ್ಪ ಮುಖ್ಯಮಂತ್ರಿಯೂ ಅಲ್ಲ.

ಗಣಿ ಸಚಿವರೂ ಆಗಿರಲಿಲ್ಲ. ಗುತ್ತಿಗೆಗೆ ಶಿಫಾರಸು ಮಾಡಿರುವುದರ ಹಿಂದೆ ಮಾಜಿ ಮುಖ್ಯಮಂತ್ರಿ ಪಾತ್ರವೇನೂ ಇಲ್ಲ. ಅಷ್ಟಕ್ಕೂ ರಾಜ್ಯ ಸರ್ಕಾರ ಮಾಡಿರುವುದು ಶಿಫಾರಸು ಮಾತ್ರ. ತೀರ್ಮಾನ ಏನಿದ್ದರೂ ಕೇಂದ್ರದ್ದು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಯಾರಿಗೂ ಅನುಕೂಲ ಮಾಡಿಕೊಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಪ್ರಮಾಣ ಪತ್ರದಲ್ಲಿ ಹೇಳಲಾಗಿದೆ.

ಸಮಾಜ ಪರಿವರ್ತನಾ ಸಮುದಾಯದ ಆರೋಪ ಕುರಿತು ಪರಿಶೀಲಿಸಿ ಸಿಬಿಐ ತನಿಖೆ ಅಗತ್ಯವಿದೆಯೇ ಎಂಬ ಬಗ್ಗೆ ವರದಿ ಸಲ್ಲಿಸುವಂತೆ ಸಿಇಸಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಪರಿವರ್ತನಾ ಸಮುದಾಯದ ಎಸ್.ಆರ್.ಹಿರೇಮಠ ಅವರ ವಿಚಾರಣೆಯನ್ನು ಪೂರ್ಣಗೊಳಿಸಿರುವ ಸಿಇಸಿ ಸದ್ಯದಲ್ಲೇ ವರದಿ ಸಲ್ಲಿಸಲಿದೆ.

ಅಕ್ರಮ ಗಣಿಗಾರಿಕೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎಸ್.ಎಚ್. ಕಪಾಡಿಯಾ ನೇತೃತ್ವದ ಅರಣ್ಯ ಪೀಠ ವರದಿ ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.