ಶುಕ್ರವಾರ, ನವೆಂಬರ್ 22, 2019
20 °C

ಸಿಬಿಐ ದುರ್ಬಳಕೆ: ಮುಲಾಯಂ ಆಕ್ರೋಶ

Published:
Updated:

ಲಖನೌ (ಪಿಟಿಐ): ಸಿಬಿಐ ಸಂಸ್ಥೆಯನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿರುವುದರಿಂದಾಗಿ ಅದರ ವಿರುದ್ಧ ಹೋರಾಟ ಕಷ್ಟಕರ ಎನಿಸಿದೆ ಎಂದು ಸಮಾಜವಾದಿ ಪಕ್ಷದ ವರಿಷ್ಠ ನಾಯಕ ಮುಲಾಯಂ ಸಿಂಗ್ ಯಾದವ್ ಕಿಡಿಕಾರಿದ್ದಾರೆ.ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಮುಲಯಂ, `ಸರ್ಕಾರದ ವಿರುದ್ಧ ಸಂಘರ್ಷ ನಡೆಸುವುದು ಅಷ್ಟು ಸುಲಭವಲ್ಲ, ಅದಕ್ಕೆ ಸಾವಿರಾರು ಕೈಗಳಿದ್ದು ಯಾರನ್ನಾದರೂ ಜೈಲಿಗೆ ಅಟ್ಟಲು ಸಿಬಿಐ ಅನ್ನು ಬಳಕೆ ಮಾಡಿಕೊಳ್ಳುತ್ತಿದೆ' ಎಂದು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.`ಬೆದರಿಕೆ ತಂತ್ರ ಅನುಸರಿಸುವ ಮೂಲಕ ಕಾಂಗ್ರೆಸ್ ಬೆಂಬಲ ಗಿಟ್ಟಿಸಲು ಪ್ರಯತ್ನಿಸುತ್ತಿದೆ' ಎಂದು ಅವರುಆರೋಪಿಸಿದರು.

ಪ್ರತಿಕ್ರಿಯಿಸಿ (+)